‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

Date:

Advertisements

ಗುರುವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬಗ್ಗೆ ದೆಹಲಿ ಪೊಲೀಸರ ಹಲ್ಲೆಯಿಂದ ಆಘಾತಕ್ಕೊಳಗಾದ ವಿಶ್ವ ಚಾಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಅವರು, “ನೀವು ನಮ್ಮನ್ನು ಕೊಲ್ಲಲು ಬಯಸಿದರೆ ಕೊಂದುಬಿಡಿ, ಆದರೆ ಈ ರೀತಿ ಹಿಂಸಿಸಬೇಡಿ. ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನೂ ಸಹ ಸೇವಿಸಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕಿದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಆರೋಪಿಸಿದರು.

ಮಹಿಳಾ ಪೊಲೀಸ್ ಅಧಿಕಾರಿಗಳ ಗೈರು ಹಾಜರಿಯನ್ನು ಪ್ರಶ್ನಿಸಿದ ವಿನೇಶ್​​, “ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ? ನಾವು ಅಪರಾಧಿಗಳಲ್ಲ ನಾವು ಇದೆಲ್ಲವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

Advertisements

ಕುಸ್ತಿಪಟುಗಳು ರಾತ್ರಿ ಮಲಗಲು ಮಡಚಬಹುದಾದ ಮಂಚಗಳನ್ನು ತರಲು ಹೋಗುತ್ತಿದ್ದಾಗ ಘಟನೆ ನಡೆದಿದೆ. ಪೊಲೀಸರು ಅನುಚಿತವಾಗಿ ವರ್ತಿಸಿದ್ದಲ್ಲದೆ, ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ಮಹಿಳೆಯರೊಂದಿಗೆ ಗೌರವವಾಗಿ ನಡೆದುಕೊಳ್ಳಬೇಕಾದ ಸಮಾಜದಲ್ಲಿ ಪೊಲೀಸರು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಜಂತರ್‌ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ

“ಮಳೆ ಬಂದ ಕಾರಣ ಹಾಸಿಗೆಗಳು ಒದ್ದೆಯಾಗಿದ್ದವು. ಆದ್ದರಿಂದ ನಾವು ಮಲಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದೆವು. ಆದರೆ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ನಿಂದಿಸಿದ ಪೊಲೀಸ್ ಅಧಿಕಾರಿ ಧರ್ಮೇಂದ್ರ ಅವರು, ನಮ್ಮೊಂದಿಗೆ ಜಗಳವಾಡಿದರು. ಅವರು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರೂ ಅಲ್ಲ” ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ತಡರಾತ್ರಿ ನಡೆದ ವಾಗ್ವಾದದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಕುಸ್ತಿಪಟುಗಳ ಬೆಂಬಲಿಗರು ಹಾಸಿಗೆಗಳನ್ನು ತೆಗೆದುಕೊಳ್ಳದಂತೆ ತಡೆದ ನಂತರ ಆಕ್ರಮಣಕಾರಿಯಾಗಿ ವರ್ತಿಸಿದರು ಎಂದು ತಿಳಿಸಿದ್ದಾರೆ.

ಕಳೆದ ಜನವರಿ ತಿಂಗಳಿನಲ್ಲಿ ಭಾರತದ ಅಗ್ರಗಣ್ಯ ಕುಸ್ತಿಪಟುಗಳಾದ ವಿನೀಶ್ ಫೋಗಟ್, ಭಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪವನ್ನು ಮಾಡಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಿ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿ ಪೊಲೀಸರಿಗೆ ದೂರನ್ನೂ ಸಹ ನೀಡಿದ್ದರು.

ಆದರೆ ದೂರು ನೀಡಿ ಮೂರು ತಿಂಗಳುಗಳು ಕಳೆದರೂ ಸಹ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಈಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X