ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ರಾತ್ರಿ ವೇಳೆ ಅನ್ನ ಸಾಂಬಾರ್ ನೀಡಲಾಗಿದೆ ಯಾವುದೇ ತೊಂದರೆ ಇಲ್ಲದೆ ವಿದ್ಯಾರ್ಥಿಗಳು ನಿದ್ದೆ ಮಾಡಿದ್ದಾರೆ. ಬೆಳಗಿನ ಉಪಹಾರ ಚಿತ್ರಾನ್ನ ಸೇವಿಸಿದ ಬಳಿಕ ಘಟನೆ ನಡೆದಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಈ ವೇಳೆ ಶಿಕ್ಷಕರು ಅಸ್ವಸ್ಥ ವಿದ್ಯಾರ್ಥಿಗಳಿಗೆ ಒಆರ್‌ಎಸ್ ಕುಡಿಸಿದ ನಂತರ ಕೆಲ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ, ʼಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸ ಆಗಿರುವ ಕಾರಣದಿಂದ ಈ ರೀತಿಯ ಸಮಸ್ಯೆ ಆಗಿರಬಹುದು. ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆʼ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 2/09/2024
ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ.