ಕೋಮುಭಾವನೆ ಧಕ್ಕೆ ಹಾಗೂ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಐವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿ ಹಿಂದೂ-ಮುಸ್ಲಿಂ ಬಗ್ಗೆ ಪ್ರಚೋದನಕಾರಿ ನೀಡುವ ರೀತಿಯಲ್ಲಿ ಮಾತನಾಡಿದ್ದರು. ಹೀಗಾಗೊ ಗಲಭೆಗೆ ಪ್ರಚೋದನೆ ನೀಡುವ ರೀತಿ ಮಾತನಾಡಿದ್ದು ವಿಡಿಯೊದಲ್ಲಿ ಕಂಡು ಬಂದಿದ್ದರಿಂದ ಕಲಂ 299, 192 ಬಿಎನ್‌ಎಸ್ -2023 ಅಡಿಯಲ್ಲಿ ಪಿಎಸ್‌ಐ ಶ್ಯಾಮಸುಂದರ್ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರತಾಪ ಸಿಂಹ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಗಣೇಶ ವಿಸರ್ಜನೆ ವೇಳೆ ಮಾತನಾಡಿ, ʼಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾʼ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.
ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ವಿಪಕ್ಷದವರ ರಾಜಕೀಯ ದುರುದ್ದೇಶ ಬಯಲು ಮಾಡುತ್ತೇವೆ: ಸಚಿವ ಪರಮೇಶ್ವರ್
ಕಾರ್ಯಕ್ರಮದ ಆಯೋಜಕರಾದ ಕರಣ ಸುಬೇದಾರ, ಶಿವಕುಮಾರ ಶಿರವಾಳ, ಗುರುರಾಜ ಕಾಮಾ, ನಾಗಭೂಷಣ ಸೇರಿ ಐವರು ವಿರುದ್ಧ ಪ್ರಕರಣ ದಾಖಲಾಗಿದೆ.