ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ.
ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಬಳಿಕ ಆಜಾದ್ ಸರ್ಕಲ್ ಬಳಿಯ ಅಗಸಿ ಹತ್ತಿರ ಗುರುರಾಜ್ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಅಥಣಿ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.