ಕರ್ನಾಟಕದ ಮೇಲೆ ಬಿಜೆಪಿಯವರು ಮುಗಿಬಿದ್ದಿರುವ ಕಾರಣ ವಿವರಿಸಿದ ಸಿದ್ದರಾಮಯ್ಯ

Date:

Advertisements
  • ಮುಂದಿನ ಮೂರು ದಿನ ರಾಜ್ಯದಲ್ಲಿರುತ್ತೀರಿ, ನಿಮ್ಮ ಅಳು ನಿಲ್ಲಿಸಿ
  • ದೇಶದ ಹಣ ಲಪಟಾಯಿಸುವುದು ಹೇಗೆ ಎಂಬುದೇ ಬಿಜೆಪಿ ಕೆಲಸ

ಕರ್ನಾಟಕ ರಾಜ್ಯ ಉಳಿಯಬೇಕಾದರೆ, ತನ್ನ ವೈಭವ ಉಳಿಸಿಕೊಳ್ಳಬೇಕಾದರೆ ಜನರು ಬಿಜೆಪಿಯನ್ನು ಸೋಲಿಸಿ ಮನೆಗೆ ಕಳಿಸುವುದೊಂದೆ ದಾರಿ. ಸಾವಧಾನದಿಂದ ಯೋಚಿಸಿ ತೀರ್ಮಾನಿಸಬೇಕು ಎಂದು ಜಾಣರಾದ ನಾಡಿನ ಜನರನ್ನು ಕೇಳಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಅಂಬಾನಿಯ ಕಣ್ಣು ನಮ್ಮ ನಂದಿನ ಹಾಲಿನ ಮೇಲೆ ಇದೆ. ಅದಾನಿಯ ಕಣ್ಣು ನಮ್ಮ ರೈತರ ಕೃಷಿ ಉತ್ಪನ್ನಗಳ ಮೇಲೆ, ನಮ್ಮ ವಿದ್ಯುತ್ತಿನ ಮೇಲೆ ಇದೆ. ಅವರಿಗೆ ಸಹಾಯ ಮಾಡಲು ಅತ್ತೂ ಕರೆದು ಪ್ರಚಾರ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದ ಪವಿತ್ರ ಹನುಮನ ನೆಲವಾದ ಬಳ್ಳಾರಿಯ ಬೆಟ್ಟಗಳ ಒಡಲು ಬಗೆದು ಅದಿರು ವಿದೇಶಗಳಿಗೆ ಮಾರಿದ ದುಡ್ಡಲ್ಲಿ ಬಿಜೆಪಿಯು ದೇಶದಲ್ಲಿ ಪಾರ್ಟಿ ಕಟ್ಟಿತು. ಈಗ 40 ಪರ್ಸೆಂಟ್ ಕೊಳ್ಳೆ ಹೊಡೆದು ಕೊಬ್ಬಿ ಕೂತಿದೆ. ಕರ್ನಾಟಕವನ್ನು ಎಲ್ಲ ರೀತಿಯಲ್ಲೂ ಸುಲಿಗೆ ಮಾಡಿ ಎಟಿಎಂ ಮಾಡಿಕೊಂಡಿರುವುದು ಬಿಜೆಪಿ ಪಕ್ಷ” ಎಂದು ಹರಿಹಾಯ್ದಿದ್ದಾರೆ.

Advertisements

“ಅಂತಿಮವಾಗಿ ನಾನು ಮೋದಿಯವರಿಗೆ ಹೇಳುವುದಿಷ್ಟೆ ನೀವು ಮೊದಲು ಕುಸಿದು ಹೋಗಿರುವ ಭಾರತದ ಚೈತನ್ಯವನ್ನು ಮೇಲೆತ್ತಿ. ಕರ್ನಾಟಕಕ್ಕೆ ದ್ರೋಹ ಮಾಡದೆ ಕೊಡಬೇಕಾದ ಅನುದಾನಗಳನ್ನು ಕೊಡಿ. ನಮ್ಮ ರಾಜ್ಯವನ್ನು ಹೇಗೆ ಮುನ್ನಡೆಸಬೇಕು, ನಂಬರ್ 1 ಮಾಡಬೇಕೆಂದು ನಮಗೆ ಗೊತ್ತಿದೆ. ಯಾಕೆಂದರೆ ನಿಮ್ಮ ಗುಜರಾತ್ ಮಾಡೆಲ್ ಎಂಥದ್ದು ಎಂಬುದನ್ನು ಅರ್ಥ ಮಾಡಿಕೊಳ್ಳಲು ನೀವು ಮುಖ್ಯಮಂತ್ರಿಯಿದ್ದಾಗಿನಿಂದ ಈವರೆಗೆ ನಿಮ್ಮ ರಾಜ್ಯದ ಮಕ್ಕಳ ಮತ್ತು ಮಹಿಳೆಯರ ಅಪೌಷ್ಟಿಕತೆಯ ಪ್ರಮಾಣವನ್ನು ನೋಡಿದರೆ ಸಾಕು ಅರ್ಥವಾಗುತ್ತದೆ” ಎಂದು ಟೀಕಿಸಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ಮುಂದಿನ ಮೂರು ದಿನ ರಾಜ್ಯದಲ್ಲಿರುತ್ತೀರಿ. ದಯಮಾಡಿ ನಿಮ್ಮ ಅಳು ನಿಲ್ಲಿಸಿ ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಿ ಎಂಬುದನ್ನು ಮಾತನಾಡಿ. ನಿಮ್ಮ ದ್ರೋಹದ ಟ್ರಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ಅಳುವಂತಾಗಿದೆ” ಎಂದು ಕಿಡಿಕಾರಿದ್ದಾರೆ.

ಭಾರತವನ್ನು ನಂಬರ್ ಒನ್ ಮಾಡಿದರೆ?

ಮೋದಿಯವರು ಪ್ರಧಾನ ಮಂತ್ರಿಯಾಗಿ ಎರಡು ಅವಧಿ ಮುಕ್ತಾಯಗೊಳಿಸುತ್ತಿದ್ದಾರೆ. ಬಹುಮತದೊಂದಿಗೆ, 9 ವರ್ಷ ಅಧಿಕಾರ ನಡೆಸಿದ್ದಾರೆ. ನಮ್ಮ ದೇಶವನ್ನು ಅಭಿವೃದ್ಧಿ ಮಾಡಲು, ಅನೇಕ ಕ್ಷೇತ್ರಗಳಲ್ಲಿ ನಂಬರ್ 1 ಮಾಡಲು ಅನೇಕ ಅವಕಾಶಗಳಿದ್ದವು. ಅವುಗಳನ್ನು ಮೋದಿಯವರು ಕೈಯಾರೆ ಹೊಸಕಿ ಹಾಕಿದರು. ಯಾಕೆಂದರೆ ಅವರಿಗೆ  ದೇಶದ ಬಡವರು, ಹಿಂದುಳಿದವರು, ಮಹಿಳೆಯವರು, ಅಭಿವೃದ್ಧಿಯಾಗುವುದು ಬೇಕಾಗಿಲ್ಲ. ಈ ವರ್ಗಗಳ ಜನರ ಕೈಯಲ್ಲಿ ಇರುವ ದುಡಿಮೆಯ ಹಣವನ್ನು ಲಪಟಾಯಿಸುವುದು ಹೇಗೆ ಎಂದು ಯೋಜನೆ ರೂಪಿಸುವುದಷ್ಟೆ ಬಿಜೆಪಿಯವರ  ಕೆಲಸವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮೋದಿಯವರ ಈ 9 ವರ್ಷಗಳ ಆಡಳಿತದಲ್ಲಿ ದೇಶ ಎಷ್ಟು ಹಾಳಾಗಿದೆ ನೋಡಿ

  • ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 2014 ರಲ್ಲಿ 55ನೆ ಸ್ಥಾನದಲ್ಲಿದ್ದ ದೇಶ 2022-23 ರಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ.
  • ಲಿಂಗ ತಾರತಮ್ಯದಲ್ಲಿ 146 ದೇಶಗಳಲ್ಲಿ 114 ನೇ ಸ್ಥಾನದಲ್ಲಿದ್ದ ದೇಶ ಈಗ 135 ನೆ ಸ್ಥಾನಕ್ಕೆ ಕುಸಿದಿದೆ.
  • ಪತ್ರಿಕಾ ಸ್ವಾತಂತ್ರ್ಯದಲ್ಲಿ 2014 ರಲ್ಲಿ 140 ನೆ ಸ್ಥಾನದಲ್ಲಿದ್ದ ಭಾರತ 161 ನೇ ಸ್ಥಾನಕ್ಕೆ ಕುಸಿದಿದೆ.
  • ಕಾನೂನು ಸುವ್ಯವಸ್ಥೆಯ ವಿಚಾರದಲ್ಲಿ 2016 ದಲ್ಲಿ 66 ರಲ್ಲಿ 2022 ರಲ್ಲಿ 77 ಸ್ಥಾನಕ್ಕೆ ಕುಸಿದಿದೆ.
  • ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 2014 ರಲ್ಲಿ 130 ನೇ ಸ್ಥಾನದಲ್ಲಿದ್ದ ಭಾರತ 2022 ರಲ್ಲಿ 132 ನೇ ಸ್ಥಾನಕ್ಕೆ ಕುಸಿದಿದೆ.
  • 2011-12 ಸ್ಥಿರ ಬೆಲೆಗಳಲ್ಲಿ ತಲಾದಾಯವು 2014-15 ರಲ್ಲಿ 72805 ರೂಪಾಯಿಗಳಿದ್ದರೆ 2022-23 ರಲ್ಲಿ 98 ಸಾವಿರ ರೂಪಾಯಿಗಳಾಗಿದೆ. 9 ವರ್ಷಗಳಲ್ಲಿ ಹೆಚ್ಚಾದ ತಲಾದಾಯ ಕೇವಲ 15 ಸಾವಿರ ರೂಪಾಯಿಗಳು ಮಾತ್ರ.
  • ಚೀನಾ ದೇಶದಿಂದ ಆಮದು ಮಾಡಿಕೊಳ್ಳುವ ಪ್ರಮಾಣ ಸುಮಾರು 10 ಲಕ್ಷ ಕೋಟಿ ರೂಗಳಿದ್ದರೆ, ರಫ್ತು ಮಾಡುವ ಪ್ರಮಾಣ 3 ಲಕ್ಷ ಕೋಟಿ ರೂಪಾಯಿಗಳಷ್ಟೂ ಇಲ್ಲ. ಹಾಗಿದ್ದರೆ ಮೇಕ್ ಇನ್ ಇಂಡಿಯಾ ಘೋಷಣೆ ಎಲ್ಲಿ?
  • 2014 ರಲ್ಲಿ ಪ್ರತಿಯೊಬ್ಬರ ತಲೆಯ ಮೇಲೆ 57 ಸಾವಿರ ರೂಪಾಯಿ ಸಾಲವಿದ್ದರೆ, 2023 ರಲ್ಲಿ 1.90 ಲಕ್ಷ ರೂಪಾಯಿಗಳಷ್ಟಾಗಿದೆ.
  • ಅಡುಗೆ ಗ್ಯಾಸ್, ಡೀಸೆಲ್, ಪೆಟ್ರೋಲ್, ಅಡುಗೆ ಎಣ್ಣೆ, ಅಕ್ಕಿ, ಬೇಳೆ ಸೇರಿದಂತೆ ಎಲ್ಲ ಬೆಲೆಗಳು ದುಪ್ಪಟ್ಟಾಗಿವೆ. ಎಲ್ಲ ರೀತಿಯಲ್ಲೂ ಜನರನ್ನು ಕೊಳ್ಳೆ ಹೊಡೆಯಲಾಗುತ್ತಿದೆ. 
  • ಸಣ್ಣ ಕೈಗಾರಿಕೆಗಳನ್ನು ಮುಚ್ಚುತ್ತಿರುವುದರಿಂದ ನಿರುದ್ಯೋಗ ತಾರಕಕ್ಕೇರುತ್ತಿದೆ. ಸೇವಾ ವಲಯದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ದಾಂಗುಡಿಯಿಡುತ್ತಿರುವದರಿಂದ ಕೋಟ್ಯಂತರ ಹುದ್ದೆಗಳು ಕಣ್ಮರೆಯಾಗುತ್ತವೆ. 

ಈಗಾಗಲೇ ಅನೇಕ ದೇಶಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸನ್ನು ಹೇಗೆ ನಿಭಾಯಿಸಬೇಕು ಎಂದು ಕಾನೂನು ಮಾಡಿವೆ.  ನಮ್ಮಲ್ಲಿ ಮೋದಿ ಸರ್ಕಾರ ಕಣ್ಣುಮುಚ್ಚಿ ಕೂತಿದೆ. ಮೋದಿಯವರು ಅದಾನಿ, ಅಂಬಾನಿ ಮುಂತಾದ ಕೆಲವೇ ಕಾರ್ಪೊರೇಟ್ ಕಂಪೆನಿಗಳನ್ನು ಉದ್ಧಾರ ಮಾಡುತ್ತಿದ್ದಾರೆ, ದೇಶದ 140 ಕೋಟಿ ಜನರನ್ನು ದಿನೇ ದಿನೇ ಬಿಕ್ಕಟ್ಟಿಗೆ ನೂಕುತ್ತಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X