ಮೇ 8ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ?

Date:

Advertisements

2023ರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಮೇ 8ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಮಾಹಿತಿ ನೀಡಿದೆ.

ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದಾರೆ. ಅಂತಿಮ ನಿರ್ಧಾರದ ಬಗ್ಗೆ ಮೇ 5ರಂದು ಶಿಕ್ಷಣ ಇಲಾಖೆ ಅಧಿಕೃತ ಮಾಹಿತಿ ನೀಡಲಿದೆ.

ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ ಮಾ. 31ರಿಂದ ಏ. 15ರವರೆಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಿತು. 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿತ್ತು ಎಂದು ಕೆಎಸ್‌ಇಎಬಿ ಹೇಳಿದೆ.

Advertisements

ರಾಜ್ಯದಲ್ಲಿ ವಿದಾನಸಭಾ ಚುನಾವಣೆ ಮೇ 10ಕ್ಕೆ ನಿಗದಿಯಾಗಿದೆ. ಹೀಗಾಗಿ, ಚುನಾವಣೆಗೂ ಮಂಚೆಯೇ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎನ್ನಲಾಗಿತ್ತು. ಕೆಲ ಶಾಲಾ ಶಿಕ್ಷಕರು ಚುನಾವಣಾ ಕೆಲಸದಲ್ಲಿ ತೊಡಗಿರುವುದರಿಂದ ಫಲಿತಾಂಶ ಮುಂದಿನ ವಾರದಲ್ಲಿ ಬಿಡುಗಡೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಶೇ.90ರಷ್ಟು ಮೇ.8ರಂದೇ ಫಲಿತಾಂಶ ಪ್ರಕಟಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಕೆಎಸ್‌ಇಎಬಿ ಕಾರ್ಯದರ್ಶಿ ಎಂ ರೇವಣ ಸಿದ್ದಪ್ಪ ತಿಳಿಸಿದ್ದಾರೆ.

ಫಲಿತಾಂಶ ಪ್ರಕಟಣೆಯಾದ ನಂತರ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿರುವ ‘ಹಾಲ್‌ ಟಿಕೆಟ್‌’ ಸಂಖ್ಯೆ ಬಳಸಿ, ಕೆಎಸ್‌ಇಎಬಿಯ ವೆಬಸೈಟ್‌ಗೆ https://karresults.nic.in/ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ಏ. 28 ಅಂತಿಮ ದಿನ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X