ಕಾರ್ಮಿಕರ ಜಿಲ್ಲಾ ಮಟ್ಟದ ಕಾನೂನುಗಳ ಅರಿವು ಕಾರ್ಯಗಾರ
ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಹಾಗೂ ಕಾನೂನುಗಳು ಜಾರಿಗೊಳಿಸಿದ್ದು, ಕಾರ್ಮಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಕರೆ ನೀಡಿದರು.
ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಉದ್ಯೋಗಿಗಳ ರಾಜ್ಯ ವಿಮಾ ನಿಧಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅನೇಕ ಕೈಗಾರಿಕೆ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಸ್ಥಾಪನೆಗೊಂಡಿದ್ದು, ಸಾವಿರಾರು ಜನರಿಗೆ ಉದ್ಯೋಗವನ್ನು ಪಡೆದುಕೊಂಡು ನೂರಾರು ಕುಟುಂಬದವರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.
ಬೆಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಜಹೀರ್ ಬಾಷ ಮಾತನಾಡಿ, ಕಾರ್ಖಾನೆ ಹಾಗೂ ಕೈಗಾರಿಕೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರು ತಮ್ಮ ಸುರಕ್ಷತೆಯನ್ನು ವಹಿಸಬೇಕು. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಸಾಕಷ್ಟು ಯೋಜನೆಗಳು ಹಾಗೂ ಕಾನೂನುಗಳನ್ನು ಜಾರಿಗೆ ತಂದು ಕಾರ್ಮಿಕ ವರ್ಗದವರ ಕಲ್ಯಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬಿಸ್ಸೆ ಇಂಡಿಯಾ ಮತ್ತು ಕೈಗಾರಿಕಾ ವೃತ್ತಿಪರ ಕೇಂದ್ರದ ಹೆಚ್.ಆರ್ ಶೇಖರ್ ಗಣಗಲೂರು, ಪಿಎಫ್ ಆಯುಕ್ತರಾದ ರಾಮಕೃಷ್ಣನ್, ಯಲಹಂಕ ಇಎಸ್ಐ ಶಾಖಾ ವ್ಯವಸ್ಥಾಪಕರಾದ ಅಕ್ಷತಾ ರಾವ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಉಪ ನಿರ್ದೇಶಕರಾದ ಎಂ.ಎ ಸೋಮಶೇಖರ್, ತಿಮ್ಮರಾಜು ವಿ ಸೇರಿದಂತೆ ಇನ್ನಿತರೆ ಪ್ರಮುಖರು ವಿವಿಧ ವಿಷಯವಾರು ಉಪನ್ಯಾಸ ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸುಬ್ಬರಾವ್ ಎಸ್, ಜಿಲ್ಲೆಯ ನಾಲ್ಕು ತಾಲೂಕು ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಕೈಗಾರಿಕೆಗಳ ಮುುಖ್ಯಸ್ಥರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.