ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

Date:

Advertisements

ಕೋಲಾರ ನಗರ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಇಟ್ಟುಹೋಗಿದ್ದ ಸೆನ್ಸಾರ್ ಸೂಟ್‌ಕೇಸ್ ಅನ್ನು ಬೆಂಗಳೂರಿನ ಬಾಂಬ್ ನಿಷ್ಕ್ರಿಯ ದಳ ತಜ್ಞರು ಬುಧವಾರ ಡಿಟೋನೇಟರ್ ಮೂಲಕ ಲಘು ಸ್ಫೋಟ ಮಾಡಿ ನಾಶಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ನಗರ ಹೊರವಲಯದ ಟಮಕ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಸೂಟ್‌ಕೇಸ್ ಒಂದನ್ನು ಇಟ್ಟುಹೋಗಿದ್ದು, ಸೂಟ್‌ಕೇಸ್‌ನಿಂದ ನಿರಂತರವಾಗಿ ಶಬ್ಧ ಬರುತ್ತಿತ್ತು. ಇದು ನಗರದ ಜನರಲ್ಲಿ ಆತಂಕ ಹುಟ್ಟಿಸಿತ್ತು.

kolar suitcase1

ಸ್ಥಳಕ್ಕಾಗಮಿಸಿದ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಮೂರು ಬಾರಿ ಪರಿಶೀಲನೆ ನಡೆಸಿದರು. ಈ ವೇಳೆ ಸೂಟ್‌ಕೇಸ್ ಒಳಗೆ ಏನೂ‌ ಇರಲಿಲ್ಲ ಎಂಬುದನ್ನು ಕಂಡುಕೊಂಡರು.

Advertisements

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು. ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆಯ ಬಳಿಕ ಡಿಟೋನೇಟರ್ ಮೂಲಕ ಲಘು ಸ್ಫೋಟ ಮಾಡಿ, ನಾಶಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

ಪ್ರಾಥಮಿಕ ತನಿಖೆಯಲ್ಲಿ ಕ್ರೌನ್ ಕಂಪನಿಯ‌ ಅತ್ಯಾಧುನಿಕ ಸೂಟ್‌ಕೇಸ್ ಎಂಬುದು ಗೊತ್ತಾಗಿದ್ದು, ಸೂಟ್‌ಕೇಸ್ ಯಾರು ತಂದು ಹಾಕಿದ್ದಾರೆ. ಉದ್ದೇಶವೇನು ಎಂಬುದರ ಕುರಿತು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಕೋಲಾರ ಎಸ್‌ಪಿ ನಿಖಿಲ್ ತಿಳಿಸಿದ್ದಾರೆ.

ಕೋಲಾರ ಸೂಟ್‌ಕೇಸ್
ಸೂಟ್‌ಕೇಸ್
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X