ಭಾಲ್ಕಿ | ಬೋಳೇಶಂಕರ, ಕೃಷ್ಣೆಗೌಡರ ಆನೆ ನಾಟಕ ಪ್ರದರ್ಶನ

Date:

Advertisements

ಪಠ್ಯಾಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ ಪಠ್ಯಾಧಾರಿತ ಬೋಳೇಶಂಕರ ಮತ್ತು ಕೃಷ್ಣೆಗೌಡರ ಆನೆ ನಾಟಕ ಪ್ರದರ್ಶನದ ಸಾನ್ನಿಧ್ಯ ವಹಿಸಿ ಅವರು
ಮಾತನಾಡಿದರು.

ʼನಾಲ್ಕು ಗೋಡೆಯ ಕೊಠಡಿ ಒಳಗೆ ಒಬ್ಬ ಶಿಕ್ಷಕ ಪಾಠ ಮಾಡುವುದಕ್ಕಿಂತ, ಆ ಪಾಠವನ್ನು ನಾಟಕ ಚಟುವಟಿಕೆಯ ಮೂಲಕ ಹೇಳುವುದರಿಂದ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಇದರಿಂದ ಅವರ ಕಲಿಕೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದುʼ ಎಂದರು.

Advertisements

ʼಸಾಹಿತಿ, ನಾಟಕಕಾರ ಡಾ.ಚಂದ್ರಶೇಖರ ಕಂಬಾರ ರಚನೆಯ ಬೋಳೇಶಂಕರ ಮತ್ತು ಪೂರ್ಣಚಂದ್ರ ತೇಜಸ್ವಿ ರಚಿಸಿದ ಕೃಷ್ಣೆಗೌಡರ ಆನೆ ನಾಟಕದ ಮೂಲಕ ಕಲಬುರಗಿಯ ರಂಗ ಕಲಾ ತಂಡದ ಕಲಾವಿದರು ಪಠ್ಯಾಧಾರಿತ ವಿಷಯಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬೇರೂರುವಂತೆ ಅಭಿನಯಿಸಿದ್ದಾರೆʼ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

WhatsApp Image 2024 09 25 at 6.50.40 PM 1

ʼರಂಗಾ ಕಲಾ ತಂಡದ ಕಲಾವಿದರು ಪದವಿ, ಸ್ನಾತಕೋತ್ತರ ಪದವಿ ಅಧ್ಯಯನ ಮಾಡಿಕೊಂಡು ಕಲಾ ರಂಗದಲ್ಲಿ ಆಸಕ್ತಿ
ಬೆಳೆಸಿಕೊಂಡಿರುವುದು ಮಾದರಿ ಎನಸಿದೆʼ ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಸಿಎಂ ರಾಜೀನಾಮೆ ನೀಡಲಿ, ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಆರ್‌ ಅಶೋಕ್‌ ಆಗ್ರಹ

ಕಾರ್ಯಕ್ರಮದಲ್ಲಿ ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಕಲ್ಯಾಣರಾವ ಪಾಟೀಲ್ ಇದ್ದರು. ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಪ್ರಾರ್ಥನೆ ಗೀತೆ ನಡೆಸಿ ಕೊಟ್ಟರು. ಮಧುಕರ ಗಾಂವಕರ್ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X