ಉಡುಪಿ | ಜನಸಾಮಾನ್ಯರೊಂದಿಗೆ ಬ್ಯಾಂಕಿನ ಸಿಬ್ಬಂದಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು: ಜಿ.ಪಂ ಸಿಇಒ ಪ್ರತೀಕ್ ಬಾಯಲ್

Date:

Advertisements

ಬ್ಯಾಂಕ್‌ಗಳ ಮ್ಯಾನೇಜರ್‌ ಹಾಗೂ ಸಿಬ್ಬಂದಿ ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು.

Advertisements

ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು.

ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಕಳೆದ ಸಾಲಿನಲ್ಲಿ 52,676 ಕೋಟಿ ರೂ. ವ್ಯವಹಾರ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿ 58,352 ಕೋಟಿ ರೂ ವ್ಯವಹಾರ ನಡೆದು, 5676 ಕೋಟಿ ರೂ. ಹೆಚ್ಚಾಗಿ ಶೇ.10.78 ರಷ್ಟು ಬೆಳೆವಣಿಗೆಯಾಗಿದೆ. ಆರ್ಥಿಕತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಆದ್ಯತಾ ವಲಯಗಳಿಗೆ 2703.09 ಕೋಟಿ ರೂ., ಸಾಲ ವಿತರಣೆ ಮಾಡಿ ಶೇ. 30.74 ಹಾಗೂ ಆದ್ಯತೇತರ ವಲಯಗಳಿಗೆ 1677.82 ಕೋಟಿ ರೂ. ಸಾಲ ವಿತರಣೆ ಮಾಡಿ, ಶೇ. 43.65 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.46.94 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.46.92 ರಷ್ಟು ಕಡಿಮೆಯಾಗಿ 0.02 ರಷ್ಟು ಹಿನ್ನಡೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಇದನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾಂಕರ್ಸ್ ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X