ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಬುಧವಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರ ಅಸಾಂವಿಧಾನಿಕ ನಡೆ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಷಡ್ಯಂತ್ರ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಬಳ್ಳಾರಿಯ ಪದಾಧಿಕಾರಿಗಳಿಂದ ಕೈಗೆ ಕಪ್ಪು ಬಟ್ಟೆ ಧರಿಸಿ ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿದರು.
ಬಳ್ಳಾರಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಾ. ಗಾದಿಲಿಂಗನ ಗೌಡ ಅವರು ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಗೌರವಿಸುತ್ತೇವೆ. ಆದರೆ ಯಾವುದೇ ತನಿಖೆ ಆಗದೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುವುದು ಸರಿಯಲ್ಲ ಎಂದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಣೆ ಮಾಡಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೂಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಕಾರಟಗಿ | ವರ್ಷಗಳಿಂದ ದುರಸ್ತಿಯೇ ಆಗದ ರಸ್ತೆ: ಗ್ರಾಮಸ್ಥರ ಗೋಳು ಕೇಳುವವರಾರು?
ಈ ಸಂದರ್ಭದಲ್ಲಿ ಮುಖಂಡರಾದ ಮುಂಡ್ರಿಗಿ ನಾಗರಾಜ್ ಎ.ಮಾನಯ್ಯ, ಹುಮಾಯೂನ್ ಖಾನ್, ಪಿ.ಗಾದೆಪ್ಪ, ಸಂಗನಕಲ್ಲು ವಿಜಯ ಕುಮಾರ್, ವೆಂಕಟೇಶ್ ಹೆಗಡೆ, ಬಿ.ಎಂ. ಪಾಟೀಲ್, ದುರ್ಗಪ್ಪ ತಳವಾರ್, ಎರುಕಲ ಸ್ವಾಮಿ, ಬಿ.ಎಂ.ರಫಿ, ಕೆ ಎಂ.ಜಿ.ಕ ನಕ, ಶಿವಶಂಕರ್ ಸೇರಿದಂತೆ ಮತ್ತಿತರರು ಇದ್ದರು.
