ಗಂಗೇನಹಳ್ಳಿ ಡಿನೋಟಿಫಿಕೇಷನ್ | ನನಗೆ ಯಾವುದೇ ನೋಟಿಸ್ ಬಂದಿಲ್ಲ: ಕುಮಾರಸ್ವಾಮಿ

Date:

Advertisements

ಗಂಗೇನಹಳ್ಳಿ ಡಿನೋಟಿಫಿಕೇಷನ್ ವಿಚಾರವಾಗಿ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನನ್ನು ಈವರೆಗೂ ಯಾರೂ ಸಂಪರ್ಕಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಕದ್ದು ಹೋಗಲ್ಲ, ಈ ಕ್ಷಣದವರೆಗೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಈ‌ ಸರಕಾರದಲ್ಲಿ ನನ್ನ ಬಗ್ಗೆ ಸುಳ್ಳು ಹೇಳಿಕೆ, ಅಪಪ್ರಚಾರ ನಡೆಯುತ್ತಿದೆ” ಎಂದು ಆರೋಪಿಸಿದರು.

“ಹರಿಯಾಣದ ಗೋಹನಾದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಮೋದಿ ಮಾತನಾಡಿದ್ದರಲ್ಲಿ ತಪ್ಪಿಲ್ಲ. ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ್ದು ಮತ್ತು ಪೋಷಿಸಿದ್ದೇ ಕಾಂಗ್ರೆಸ್. ಇದಕ್ಕೆ ಅನೇಕ ಉದಾಹರಣೆಗಳಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ವರ್ಷಗಳಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಹಗರಣದಲ್ಲಿ ಸಿಲುಕಿದ್ದಾರೆ ಎಂದಿದ್ದರು” ಎಂದು ಸಮರ್ಥಿಸಿಕೊಂಡರು.

Advertisements

“ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿ‌ತ್ತು. ಕಾಂಗ್ರೆಸ್​ನಲ್ಲಿ 40 ಪರ್ಸೆಂಟ್​​ಗೂ ಹೆಚ್ಚು ಕಮಿಷನ್​ ಕೇಳ್ತಾರಂತೆ ಎಂಬ ಆರೋಪ ನಂತರ ಕೇಳಿಬಂತು. ಈ ಬಗ್ಗೆ ತುಮಕೂರಿನಲ್ಲಿ ಗುತ್ತಿಗೆದಾರರೊಬ್ಬರು ಹೇಳಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X