ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ.
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಮಾಡಿದ ಆರೋಪದಲ್ಲಿ ಎಚ್ ಡಿ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ
ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಅರ್ಜಿ ತಿದ್ದುಪಡಿ ಮಾಡಲಾಗುವುದು ಎಂದು ರೇವಣ್ಣ ಪರ ವಕೀಲ ಕೋರಿದರು. ಈ ವೇಳೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ತಿಳಿಸಿದರು.
#KarnatakaHighCourt adjourns plea by JD(S) leader HD Revanna to quash kidnapping case against him (linked to sexual abuse case against Prajwal Revanna) till Oct 24.
— Bar and Bench (@barandbench) September 26, 2024
Revanna's counsel sought time to amend plea since chargesheet now filed; State allowed to file objections as well. pic.twitter.com/ZvCJDcaSR9
