ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾದ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ ಹಂ ಪ ನಾಗರಾಜಯ್ಯ (ಹಂಪನಾ) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಮಹೋತ್ಸವಕ್ಕೆ ಗುರುವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು.
ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ನಿವಾಸಕ್ಕೆ ದಸರಾ ಸ್ವಾಗತ ಸಮಿತಿ ನಿಯೋಗ ತೆರಳಿ ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಿದರು.
ದಸರಾ ಸ್ವಾಗತ ಸಮಿತಿ ನಿಯೋಗದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ ಎಂ ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ ಜೆ ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಇದ್ದರು.
ಸಿಎಂ ಸಿದ್ದರಾಮಯ್ಯಗೂ ಆಹ್ವಾನ
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಆಹ್ವಾನ ನೀಡಿದರು.
ಇದನ್ನು ಓದಿದ್ದೀರಾ? ಧಾರವಾಡ | ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದು: ನ್ಯಾ. ಪರಶುರಾಮ ದೊಡ್ಡಮನಿ
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ದಸರಾ ಉದ್ಘಾಟನೆ, ಜಂಬೂ ಸವಾರಿ,ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.
ಆಹ್ವಾನದ ನಿಯೋಗದಲ್ಲಿ ಶಾಸಕರಾದ ಡಿ ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ,ಎಸ್ ಸಿ ಎನ್ ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಇದ್ದರು.
