ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಅಧಿಕೃತ ಆದೇಶ ಪ್ರಕಟ

Date:

Advertisements

ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.

ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು. ಈಗ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸುವ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.

Advertisements

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ.

ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆ ಸಿಗಲಿದೆ. ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ನೀಡಿರುವ ಅಂದಾಜಿನಂತೆ, ಪ್ರತಿ ಪಾಸುದಾರರಿಗೆ ಪ್ರತಿ ತಿಂಗಳಿಗೆ ರೂ.2500 ರೂ. ಗಳಾಗಬಹುದೆಂದು ವೆಚ್ಚವನ್ನು ಅಂದಾಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X