ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 28 ಮತ್ತು 29 ರಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ ಎಂದು ಜಿಲ್ಲಾಡಳಿತ ತಿಳಿಸಿದೆ.
ಕಾರ್ಯಕ್ರಮವನ್ನು ಸೆ. 28ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಸತ್ಯಾವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ, ಆಯುಕ್ತ ಚೇತನ್ ಆರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
