ಗದಗ | ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ

Date:

Advertisements

ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಧರಣಿ ನಡೆಸಿದರು.

ಅಭಿವೃದ್ದಿಪಡಿಸಿರುವ ಮೊಬೈಲ್ ಹಾಗೂ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡುವಂತೆ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಡಿ ಎಸ್ ಕುಲಕರ್ಣಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನ‌ರ್ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

Advertisements

ಒಂದುವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಸಾಮೂಹಿಕ ರಜೆ, ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಧರಣಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X