ಬಾಗಲಕೋಟೆ | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಯೆಂದು ಬಿಂಬಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆ ಖಂಡನೀಯ; ದಸಂಸ ಪ್ರತಿಭಟನೆ

Date:

Advertisements

ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್‌ ನಡೆ ಖಂಡಿಸಿ, ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ, ಆರೋಪಿ ಶಾಸಕ ಮುನಿರತ್ನನನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ ದಸಂಸ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಬಿಜೆಪಿ, ಜೆಡಿಎಸ್‌ ವಿರುದ್ಧ ಆಕ್ರೋಶ ಹೊರಹಾಕಿದರು.

“ವಿರೋಧ ಪಕ್ಷದ ನಾಯಕ ‘ರಾಹುಲ್ ಗಾಂಧಿ ಅವರು ಮೀಸಲಾತಿ ವಿರೋಧ ಹೇಳಿಕೆ ನೀಡಿದ್ದಾರೆಂದು ಸುಳ್ಳು ಆರೋಪ ಮಾಡಿ ಬಿಜೆಪಿ, ಜೆಡಿಎಸ್ ನಾಯಕರು ಮಾಡುತ್ತಿರುವ ಪ್ರತಿಭಟನೆ ಖಂಡನೀಯ. ಸದಾ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದು, ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದ ಇಂತಹವರಿಗೆ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ?” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳುವ ಜ್ಞಾನವಾಗಲಿ ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ. ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಪಾಲು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾಗಬೇಕೆಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ. ಇದು ಹೇಗೆ ಮೀಸಲಾತಿ ವಿರೋಧ ಹೇಳಿಕೆಯಾಗುತ್ತದೆ” ಎಂದು ಹರಿಹಾಯ್ದರು.

“ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಇನ್ನೂ ಸಮಾನ ಅವಕಾಶ ಸಿಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಮಾನ ಅವಕಾಶ ಸಿಕ್ಕಿದೆಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳುವುದಕ್ಕಾಗಿಯೇ ಸುಪ್ರೀಂ ಕೋರ್ಟ್ ಜಾತಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕೆಂದು ಹೇಳಿತ್ತು. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದೆ. ಬಿಜೆಪಿ ನಾಯಕರಿಗೆ ಮತ್ತು ಕೇಂದ್ರದಲ್ಲಿರುವ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಅಷ್ಟೊಂದು ಕಾಳಜಿಯಿದ್ದರೆ ಶೀರ್ಘವಾಗಿ ದೇಶದಾದ್ಯಂತ ಜಾತಿಗಣತಿ ನಡೆಸಿ ತೋರಿಸಬೇಕು. ಮೀಸಲಾತಿ ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪಿದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲಿ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಮಾಜದ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶ್ರಮಿಸಬೇಕು: ನ್ಯಾ. ಕಿರಣ್ ಎಸ್

“ಶಾಸಕ ಮುನಿರತ್ನ ಒಕ್ಕಲಿಗ ಮತ್ತು ದಲಿತ ಸಮುದಾಯಗಳನ್ನು ಅವಹೇಳನ ಮಾಡಿದ್ದಾರೆ ಎನ್ನಲಾಗಿರುವ ಆಡಿಯೋ ಈಗಾಗಲೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು”‌ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಜಿಲ್ಲಾ ಸಂಘಟನಾ ಸಂಚಾಲಕ ಪರಶುರಾಮ ಕಾಂಬಳೆ, ಜಿಲ್ಲಾ ಸಹ ಸಂಘಟನಾ ಸಂಚಾಲಕ ರಮೇಶ ಅನಗವಾಡಿ, ಇನ್ನೋರ್ವ ಸಂಘಟನಾ ಸಹ ಸಂಚಾಲಕ ಬಸವರಾಜ ಹಳ್ಳದಮನಿ, ಎಚ್ ಎನ್ ನೀಲನಾಯಕ, ಬಸವರಾಜ ಪಾತ್ರೊಟಿ, ಕಾಶಿಮಅಭಿ ಗೋಠಿ, ಮಾರುತಿ ಚಿಕ್ಕಲಗುಂಡಿ, ಹುಲ್ಲಪ್ಪ ಅಂಟಾಹನ, ಬಸವರಾಜ ದೊಡ್ಡಮನಿ, ಮಾರುತಿ ಚಿಕ್ಕಲಗುಂಡಿ, ಸದಾಶಿವ ಐನಾಪುರ, ಚಿದಾನಂದ ತಳವಾರ, ಸದಾಶಿವ ಪಾನಕಟ್ಟಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X