ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವರ್ಷದ ‘ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ’ ನೀಡಿ ಗೌರವಿಸಿದರು.
ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ’ಯನ್ನು ದಿವ್ಯ ಪ್ರಭು ಸ್ವೀಕರಿಸಿದರು.
ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ ಮಾಡಿ: ರೈತರಿಗೆ ಕೃಷಿ ಇಲಾಖೆ ಸಲಹೆ
ಧಾರವಾಡ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಭಾದಿತ ಪ್ರದೇಶಗಳ ಪುನಃಶ್ಚೇತನಕ್ಕೆ ಅವರು ಹೆಚ್ಚಿನ ಒತ್ತು ನೀಡಿದ್ದರು. ಈ ಎಲ್ಲ ಕೊಡುಗೆಗಳನ್ನು ಆಧರಿಸಿ ಅವರಿಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ 2023-24 ನೇ ಸಾಲಿಗೆ ‘ಉತ್ತಮ ಜಿಲ್ಲಾಧಿಕಾರಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.