- ಹಳೇ ಸಂಪ್ರದಾಯದಂತೆ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
- ವೈಜ್ಞಾನಿಕ ಸಮೀಕ್ಷೆಗಳು ಬಿಜೆಪಿ ಸೋಲು ಎಂದು ವರದಿ ಮಾಡಿದ್ದವು
ಕಾಂಗ್ರೆಸ್ ಸುಳ್ಳು ಸಮೀಕ್ಷೆಗಳನ್ನು ಮಾಡಿಸಿ ದೇಶದ ಜನರನ್ನು ವಂಚಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸಮೀಕ್ಷೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸಮೀಕ್ಷೆಗಳ ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರಧಾನಿ ಮೋದಿಯವರು ಸಮೀಕ್ಷೆಗಳನ್ನು ತಳ್ಳಿಹಾಕಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್‌ನ ವಿರುದ್ಧ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಪೂರ್ವ ಸಮೀಕ್ಷೆಗಳ ಕುರಿತು ಮಾತನಾಡಿದ ಮೋದಿ, ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸಮೀಕ್ಷೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸಮೀಕ್ಷೆಗಳ ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರಧಾನಿ ಮೋದಿ ಸಮೀಕ್ಷೆಗಳ ಬಗ್ಗೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಭ್ರಷ್ಟಾಚಾರ ಮಾಡಿ ದೇಶದ ಜನರನ್ನು ಮೋಸ ಮಾಡಿದೆ. ಆದಿವಾಸಿಗಳ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಭಯೋತ್ಪಾದಕರ ವಿರುದ್ಧ ಮಾತನಾಡುವುದಿಲ್ಲ. ಭಯೋತ್ಪಾದಕರ ಕುರಿತು ಮೃದು ದೋರಣೆ ಹೊಂದಿದ್ದಾರೆ. ಕರ್ನಾಟಕದ ಜನತೆ ಕಾಂಗ್ರೆಸ್ ನೀತಿಗಳಿಂದ ಎಚ್ಚರದಿಂದಿರಿ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ
ಕಾಂಗ್ರೆಸ್ ಅಧಿಕಾರದಲ್ಲಿ ಭ್ರಷ್ಟಾಚಾರ ನಡೆದಿದೆ. ಕೇಂದ್ರದಿಂದ ಒಂದು ರೂಪಾಯಿ ಕಳಿಸಿದರೆ 15 ಪೈಸೆ ಜನರನ್ನು ಮುಟ್ಟುತ್ತದೆ ಎಂದು ಸ್ವತಃ ರಾಜೀವ್ ಗಾಂಧಿ ಒಪ್ಪಿಕೊಂಡಿದ್ದರು. ಈ 85% ಸರ್ಕಾರ ದೇಶವನ್ನು ಅಭಿವೃದ್ಧಿ ಮಾಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿ ಬಂಜಾರ ಸಮುದಾಯಕ್ಕೆ ಹಕ್ಕು ಪತ್ರ ನೀಡಿದೆ. ಬಡವರ ಅಭಿವೃದ್ಧಿ ಮಾಡಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಕರೆತಂದಿದ್ದೇವೆ. ಪಾಕಿಸ್ತಾನದಿಂದ ಅಭಿನಂದನ್ ಕರೆದಂತಿದ್ದೇವೆ ಎಂದು ಭಾವನಾತ್ಮಕವಾಗಿ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ.
ಈ ದಿನ.ಕಾಮ್ ಸೇರಿದಂತೆ ರಾಜ್ಯದ ಮತ್ತು ದೇಶದ ಕೆಲ ಮಾಧ್ಯಮ ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದವು. ಆ ವೈಜ್ಞಾನಿಕ ಸಮೀಕ್ಷೆಗಳು ಬಿಜೆಪಿ ಸೋಲು ಖಚಿತ ಎಂದಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.