ಅಂಗನವಾಡಿಗಳಿಗೂ ಉಚಿತ ವಿದ್ಯುತ್ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

Date:

Advertisements

ಅಂಗನವಾಡಿಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಇಡೀ ರಾಜ್ಯದಲ್ಲಿ ಎಷ್ಟು ಅಂಗನವಾಡಿಗಳಿವೆ, ಎಷ್ಟು ವೆಚ್ಚ ತಗುಲುತ್ತಿದೆ ಎನ್ನುವ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ರಾಜ್ಯ ಸರ್ಕಾರ ಶಾಲೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದೆ. ಅದೇ ರೀತಿ ಅಂಗನವಾಡಿಗಳಿಗೂ ವಿದ್ಯುತ್ ಉಚಿತವಾಗಿ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್‌ ಅವರು ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿದರು.

“ದಸರಾ ಜನರ ಉತ್ಸವ. ಇದು ಸರ್ಕಾರದ ಉತ್ಸವ ಅಲ್ಲ. ಇದರ ಹೊಣೆ ಜಿಲ್ಲಾಡಳಿತದ್ದು. ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ದಸರಾ ನೆಪದಲ್ಲಿ ಕಳ್ಳಾಟ ಆಡಬಾರದು” ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Advertisements

“ಮೈಸೂರು ಸಾಂಸ್ಕೃತಿಕವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಪ್ರತಿ ವರ್ಷ ದಸರಾ ಮಹೋತ್ಸವವನ್ನು ಸರ್ಕಾರ ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಕಳೆದ ವರ್ಷ ಬರಗಾಲ ಇತ್ತು. ಭೀಕರ ಬರಗಾಲ. ಈ ವರ್ಷ ಮಳೆ ಆಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಹೀಗಾಗಿ ಬರಗಾಲ ಇಲ್ಲದಿರುವುದರಿಂದ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ದಸರಾ ಆಚರಿಸುವ ಜೊತೆಗೆ ವೈಭವ ಮತ್ತು ಸಂಭ್ರಮಕ್ಕೆ ಕೊರತೆ ಆಗಬಾರದು. ನಮ್ಮ ಪರಂಪರೆ, ಚರಿತ್ರೆ, ಇತಿಹಾಸದ ವೈಭವ ಮಹೋತ್ಸವದಲ್ಲಿ ಮತ್ತು ಮಹೋತ್ಸವದ ಪರಿಣಾಮದಲ್ಲಿ ಜನರಿಗೆ ಕಾಣಿಸಬೇಕು” ಎಂದರು.

“ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ತೊಂದರೆ ಆಗದಂತೆ ಬಸ್ ಗಳ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಬೇಕು. ಶಾಲೆಗಳಿಗೆ ಹೋಗುವ ಗ್ರಾಮೀಣ ಭಾಗದ ಮಕ್ಕಳಿಗೆ ಮತ್ತು ಶಿಕ್ಷಕಿಯರಿಗೆ ತೊಂದರೆ ಆಗದಂತೆ ಬಸ್ ಗಳ ಸವಲತ್ತುಗಳನ್ನು ಕಲ್ಪಿಸಬೇಕು” ಎಂದು ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X