ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು

Date:

Advertisements
  • ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತೇಜಸ್ವಿ ಸೂರ್ಯ
  • ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದ ವಕ್ತಾರ ರಮೇಶ್ ಬಾಬು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ ಬರೆದಿದೆ.

ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಮಾತನಾಡಿರುವ ವಿಡಿಯೋ ಮತ್ತು ಪತ್ರಿಕಾ ವರದಿಗಳನ್ನು ಲಗತ್ತಿಸಿ ದೂರು ನೀಡಿದ್ದಾರೆ.

ಮೇ 3ರಂದು ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಆಗ, “ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗೂಂಡಾ ರಾಜ್ಯ, ಮಾಫಿಯಾ ರಾಜ್ಯ, ಇಸ್ಲಾಮೀಕರಣ ಹಾಗೂ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ” ಎಂದು ಹೇಳಿಕೆ ನೀಡಿದ್ದರು.

Advertisements

ತೇಜಸ್ವಿ ಸೂರ್ಯ ಅವರ ಹೇಳಿಕೆ ಉಲ್ಲೇಖಿಸಿರುವ ರಮೇಶ್ ಬಾಬು, “ಚುನಾವಣಾ ಆಯೋಗ ಪಾರದರ್ಶಕ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು” ಎಂದು ಕೆಪಿಸಿಸಿ ಪರವಾಗಿ ಮನವಿ ಮಾಡಿದ್ದಾರೆ.

“ನಮ್ಮ ಪಕ್ಷದ ವಿರುದ್ಧ ಸುಳ್ಳು ಮತ್ತು ದ್ವೇಷಪೂರಿತ ಆರೋಪವನ್ನು ಮಾಡಿರುತ್ತಾರೆ. ಕಾಂಗ್ರೆಸ್ ಪಕ್ಷದ ಮೇಲೆ ಇವರು ಮಾಡಿರುವ ಗುರುತರವಾದ ಮತ್ತು ದ್ವೇಷಪೂರಿತವಾದ ಆರೋಪವು ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ ಪಕ್ಷದ ನಾಯಕರನ್ನು ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ನಾಯಕರ ಹೇಳಿಕೆ ಮಾದರಿ ನೀತಿಸಂಹಿತೆಗೆ ವಿರುದ್ಧವಾಗಿದೆ. ಮತದಾರರಲ್ಲಿ ಮತ್ತು ಜನಸಾಮಾನ್ಯರಲ್ಲಿ ಕಾಂಗ್ರೆಸ್‌ ಪಕ್ಷದ ಬಗ್ಗೆ ಪ್ರಚೋದನೆ ಮಾಡುವ ದುರುದ್ದೇಶದಿಂದ ಕೂಡಿದೆ. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ತಪ್ಪು ಮಾಹಿತಿ ನೀಡುವ ಒಳಸಂಚಿನ ಭಾಗವಾಗಿದೆ” ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

“ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣದ ಸಂಸದ. ಅವರು ಮಾತನಾಡುವ ವೇಳೆ ಎಚ್ಚರದಿಂದ ಮತ್ತು ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಗುರಿಯಾಗಿಸಿಕೊಂಡಿರುವ ಅವರು ಪಕ್ಷದ ವಿರುದ್ಧ ಪ್ರಚೋದಿಸಿದ್ದಾರೆ” ಎಂದು ರಮೇಶ್ ಬಾಬು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ತೇಜಸ್ವಿ ಸೂರ್ಯ ಮತ್ತು ಗೌರವ್ ಭಾಟಿಯಾ ಧರ್ಮಾಧಾರಿತವಾಗಿ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂಬ ದುರುದ್ದೇಶಪೂರಿತ ಆರೋಪ ಮಾಡಿ ಕಾಂಗ್ರೆಸ್ ಪಕ್ಷ ಧರ್ಮ ವಿರೋಧಿ ಎಂಬ ಸಂದೇಶ ನೀಡಲು ಪ್ರಯತ್ನಿಸಿದ್ದಾರೆ” ಎಂದಿದ್ದಾರೆ.

“ಬಿಜೆಪಿ ನಾಯಕರ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪಿಗೆ ವಿರುದ್ಧವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ತೇಜೋವಧೆ ಮಾಡುವ ಮತ್ತು ಕಾಂಗ್ರೆಸ್ ಪಕ್ಷದ ಹೆಸರಿಗೆ ಮಸಿ ಬಳಿಯುವ ವ್ಯವಸ್ಥಿತ ಸಂಚಾಗಿರುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X