ರಾಯಚೂರು | ಪ್ರವೇಶ ಶುಲ್ಕ ಕಡಿತಗೊಳಿಸಲು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮನವಿ

Date:

Advertisements

ರಾಯಚೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕವನ್ನು ಕಡಿಮೆ ಮಾಡಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಿಸಿ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಪ್ರಕಾಶ ಬುಳ್ಳ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಯಚೂರು ವಿಶ್ವವಿದ್ಯಾಲಯ 2024-25 ನೆಯ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸ್ನಾತಕೋತ್ತರ ಪದವಿಗಳಿಗಾಗಿ ಸಾಮಾನ್ಯ ವಿದ್ಯಾರ್ಥಿಗೆ ಪ್ರತಿ ವಿಭಾಗಕ್ಕೆ ಪ್ರವೇಶವನ್ನು ಸಲ್ಲಿಸಲು ದರ 800 ಹಾಗೂ ಎಸ್ಸಿ ಮತ್ತು ಎಸ್‌ಟಿ ವರ್ಗದವರಿಗೆ 400 ಅನ್ನು ನಿಗದಿಪಡಿಸಿದೆ. ಒಂದು ವಿದ್ಯಾರ್ಥಿ ಹಲವು ವಿಭಾಗಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ಪ್ರತಿ ಅರ್ಜಿಗೂ ಪ್ರತ್ಯೇಕವಾಗಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.

ಶುಲ್ಕ ಹೆಚ್ಚಳದಿಂದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬಹಳ ಹೊರೆಯನ್ನು ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಬೇರೆ ವಿಶ್ವವಿದ್ಯಾಲಯಗಳು ಇದೆ. ಪ್ರವೇಶಾತಿಗಾಗಿ 200ರಿಂದ 400 ನಿಗದಿಪಡಿಸಿವೆ. ಆದರೆ ನಮ್ಮ ವಿಶ್ವವಿದ್ಯಾಲಯ ಅತಿ ಹೆಚ್ಚಿನ ಅರ್ಜಿ ಶುಲ್ಕವನ್ನು ನಿಗದಿ ಮಾಡಿದ್ದು ಸಮಂಜಸವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ವಿಭಾಗಗಳಿಗೆ ಪ್ರವೇಶಾತಿಯನ್ನು ಹೆಚ್ಚಿಸುವ ಸಲುವಾಗಿ ಅರ್ಜಿ ಶುಲ್ಕವನ್ನು ಕಡಿಮೆಗೊಳಿಸಬೇಕು. ಈಗಾಗಲೇ ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಒಂದು ವರ್ಷ ಕಳೆಯುತ್ತಾ ಬಂದರೂ ಕೂಡ ಇನ್ನುವವರೆಗೂ ಅಂಕಪಟ್ಟಿ ವಿತರಿಸಲಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಹಾಗೂ ಸರ್ಕಾರಿ ಸೌಲಭ್ಯವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಕೂಡಲೇ ಎಲ್ಲ ವಿಭಾಗದ ಅಂಕ ಪಟ್ಟಿಯನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಮನರೇಗಾ ಕೂಲಿ ದರ ,ಮಾನವ ದಿನಗಳ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳುವಳಿ

ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಅಧ್ಯಕ್ಷರಾದ ಮೌನೇಶ ತುಗ್ಗಲದಿನ್ನಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹುಸೇನಪ್ಪ ಇರಕಲ್, ವಿದ್ಯಾರ್ಥಿ ಮುಖಂಡರಾದ ಅನಿಲ್ ಕುಮಾರ್,ಮೌನೇಶ, ಶೃತಿ,ವಿಜಯಲಕ್ಷ್ಮಿ, ಶೋಭಾ ಚಂದ್ರು, ವೀರೇಶ್ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X