ದಸರಾವನ್ನು ಜನರ ಉತ್ಸವದಂತೆ ಆಚರಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Date:

Advertisements

ಸಾಹಿತಿ ಹಂ.ಪ. ನಾಗರಾಜಯ್ಯನವರು ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶುಕ್ರವಾರ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಪತ್ರಿಕಾ ಗೋಷ್ಠಿಯನ್ನು ನಡೆಸಿ ಮಾತನಾಡಿ ಈ ಮಾಹಿತಿ ನೀಡಿದರು.

ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ , ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ” ಎಂದರು.

Advertisements

ಇದನ್ನು ಓದಿದ್ದೀರಾ? ಮೈಸೂರು ದಸರಾ | ಉದ್ಘಾಟಕರಾದ ಸಾಹಿತಿ ಹಂಪನಾ, ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಕೂಡಾ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. “ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಅನಾಹುತ ನಡೆಯುವ ಸಂಭವವಿರುತ್ತಿರಲಿಲ್ಲ” ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಪೊಲೀಸರಿಗೆ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X