‘ಧೈರ್ಯಶಾಲಿ ರಾಜಕಾರಣಿ’ : ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ನಟ ಸೈಫ್ ಅಲಿ ಖಾನ್

Date:

Advertisements

ಲೋಕಸಭೆಯ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ನಟ ಸೈಫ್ ಅಲಿ ಖಾನ್ ಹಾಡಿಹೊಗಳಿದ್ದು, ‘ಧೈರ್ಯಶಾಲಿ ರಾಜಕಾರಣಿ’ ಎಂದು ಕರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ನಟ ಸೈಫ್ ಅಲಿ ಖಾನ್ ಬಳಿ ನೀವು ಯಾವ ರಾಜಕಾರಣಿಯನ್ನು ಇಷ್ಟಪಡುತ್ತೀರಿ ಎಂದು ಪ್ರಶ್ನಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ “ನಾನು ‘ಧೈರ್ಯಶಾಲಿ ರಾಜಕಾರಣಿ’ಯನ್ನು ಇಷ್ಟಪಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಪ್ರಮುಖ ರಾಜಕಾರಣಿಗಳಾದ ರಾಹುಲ್ ಗಾಂಧಿ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪೈಕಿ ಯಾರು ‘ಧೈರ್ಯಶಾಲಿ ರಾಜಕಾರಣಿ’ ಎಂದು ನಿಮಗನಿಸುತ್ತದೆ ಮತ್ತು ಯಾರು ಭವಿಷ್ಯದಲ್ಲಿ ಭಾರತವನ್ನು ಮುನ್ನಡೆಸಬಲ್ಲ ಯಶಸ್ವಿ ರಾಜಕಾರಣಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ನಟ ಸೈಫ್ ಅಲಿ ಖಾನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿಯನ್ನ ಮುಗಿಸುವ ಸಂಚು..! | Rahul Gandhi

“ಇವರೆಲ್ಲವೂ ಧೈರ್ಯಶಾಲಿ ರಾಜಕಾರಣಿಗಳು. ಆದರೆ ರಾಹುಲ್ ಗಾಂಧಿಯವರ ಕಾರ್ಯವೂ ಕೂಡಾ ಅತೀ ಪ್ರಭಾವಶಾಲಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಈ ಹಿಂದೆ ರಾಹುಲ್ ಗಾಂಧಿ ಅವರು ಮಾಡುತ್ತಿದ್ದ ಕಾರ್ಯಕ್ಕೆ, ಅವರ ಮಾತುಗಳಿಗೆ ಜನರು ಗೌರವ ನೀಡುತ್ತಿರಲಿಲ್ಲ. ಆದರೆ ಆಸಕ್ತಿದಾಯಕ ರೀತಿಯಲ್ಲಿ ಅತೀ ಕಷ್ಟಪಟ್ಟು ಕೆಲಸ ಮಾಡುವ ಮೂಲಕ ರಾಹುಲ್ ಗಾಂಧಿ ಜನರ ಅಭಿಪ್ರಾಯವನ್ನು ಬದಲಾಯಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಿಸಿದರು.

ರಾಹುಲ್ ಗಾಂಧಿಯ ಬಗ್ಗೆ ಸೈಫ್ ಅಲಿ ಖಾನ್ ಅವರ ಮೆಚ್ಚುಗೆ ಮಾತುಗಳ ವಿಡಿಯೋ ತುಣುಕು ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗುತ್ತಿದೆ. ಕೆಲವು ನೆಟ್ಟಿಗರು ಸೈಫ್‌ ಅಲಿ ಖಾನ್ ಅವರನ್ನು ರಾಹುಲ್ ಗಾಂಧಿಯ ಪ್ರಚಾರಕ ಎಂದು ಕರೆದರೆ, ಇನ್ನು ಕೆಲವರು ನಟನ ಹೇಳಿಕೆಗೆ ಸಮ್ಮತಿ ವ್ಯಕ್ತಪಡಿಸಿದ್ದಾರೆ.

ಇನ್ನು ಸೈಫ್ ಅಲಿ ಖಾನ್ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ‘ದೇವಾರ: ಪಾರ್ಟ್‌ 1’ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೊರ್ಟಾಲ ಶಿವ ನಿರ್ದೇಶನದ ಈ ಸಿನಿಮಾ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X