ಕಲಬುರಗಿ | ಜಾತಿ, ಲಿಂಗ ತಾರತಮ್ಯ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

Date:

Advertisements

ಜಾತಿ ಹಾಗೂ ಲಿಂಗ ತಾರತಮ್ಯ ಮತ್ತು ಅಸ್ಪೃಶ್ಯಾಚರಣೆ, ಪ್ರಬಲ ಜಾತಿಗಳ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ(ಡಿಎಚ್‌ಎಸ್‌), ದೇವದಾಸಿ ಮಹಿಳಾ ವಿಮೋಚನಾ ಸಂಘ, ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಹಾಗೂ ಐಟಿಐಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಎಂ ಖರ್ಗೆಯವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸಂಚಾಲಕ ಯು ಬಸವರಾಜ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ಬಂದು 77ವರ್ಷಗಳು ಪೂರೈಸುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದರೂ, ಅದರ ಫಲ ಬಹುತೇಕರಿಗೆ ಸಿಗದೆ, ದಲಿತರ ಹೊಟ್ಟೆಯ ಸಮಸ್ಯೆ ಪರಿಹಾರವಾಗಲಿಲ್ಲ. ಹಸಿವಿನ ಸಾವುಗಳು ನಿಲ್ಲಲಿಲ್ಲ. ಜಾತಿ ಹಾಗೂ ಲಿಂಗ ತಾರತಮ್ಯ, ಅಸ್ಪೃಶ್ಯಾಚರಣೆಗಳು, ಪ್ರಬಲ ಜಾತಿಗಳ ದೌರ್ಜನ್ಯ ನಿಲ್ಲದೆ ಮುಂದುವರೆಯುತ್ತಿದೆ. ಇದೆಲ್ಲವೂ ತೀವ್ರ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದೌರ್ಜನ್ಯವನ್ನು ಪರಿಣಾಮಕಾರಿಯಾಗಿ ತಡೆಯಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದೆ, ಅವುಗಳೂ ಕೂಡಾ ತಾರತಮ್ಯ ನೀತಿಯಲ್ಲಿ ಮುಂದುವರೆಸಿರುವುದು ವಿಷಾಧನೀಯವಾಗಿದೆ” ಎಂದು ತಿಳಿಸಿದರು.

“ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ ಬಾಕಿ ತಕ್ಷಣವೇ ಬಿಡುಗಡೆ ಮಾಡಬೇಕು. ಬಿಟ್ಟು ಹೋದ ದೇವದಾಸಿ ಮಹಿಳೆಯರ ಮತ್ತು ಅವರ ಗಂಡ ಬಿಟ್ಟ ಹೆಣ್ಣುಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರ ಗಣತಿ ಆರಂಭಿಸಬೇಕು. ಅವರಿಗೆ ಪುನರ್ ವಸತಿ ಸೌಲಭ್ಯ ಒದಗಿಸಬೇಕು. ಮಸಣ ಕಾರ್ಮಿಕರನ್ನು ಗಣತಿ ಮಾಡಿ 45 ವರ್ಷ ಮೇಲ್ಪಟ್ಟವರಿಗೆ ಮಾಸಿಕ ₹3000 ಪಿಂಚಣಿ ಜಾರಿಗೊಳಿಸಬೇಕು. ಪ್ರತಿ ಗುಂಡಿ ಅಗೆದು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಉದ್ಯೋಗ ಖಾತ್ರಿ ಕೆಲಸವೆಂದು ಪರಿಗಣಿಸಿ ಕನಿಷ್ಠ ₹3000 ಒದಗಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಾಧ್ಯಮಗಳು ಜನಪರವಾಗಿ ಇರಬೇಕು: ರಿಷಿಕೇಶ್ ದೇಸಾಯಿ

“ದಲಿತ ವಿದ್ಯಾವಂತ ನಿರುದ್ಯೋಗ ಯುವಕ/ಯುವತಿಯರಿಗೆ ಮಾಸಿಕ ₹10,000 ನಿರುದ್ಯೋಗ ಭತ್ಯೆ ಒದಗಿಸಬೇಕು. ದಲಿತ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಶೇ.75ರಷ್ಟು ಸಹಾಯಧನದ ಬಡ್ಡಿರಹಿತ ₹10 ಲಕ್ಷ ಸರಕಾರದ ಗ್ಯಾರಂಟಿ ಸಾಲ ಕೊಡಬೇಕು. ಬೇಸಾಯ ಮಾಡಲು ಬಯಸುವ ಎಲ್ಲ ದಲಿತ ಕುಟುಂಬಗಳಿಗೆ ತಲಾ 5 ಎಕರೆ ಜಮೀನನ್ನು ಭೂಸ್ವಾಧೀನದ ಮೂಲಕ ಒದಗಿಸಬೇಕು” ಎಂಬುದು ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪಾಂಡುರಂಗ ಮಾವಿನಕರ್, ಅಧ್ಯಕ್ಷೆ ಚಂದಮ್ಮ ಗೋಳಾ, ಸುಧಾಮ ಧನ್ನಿ, ಸುಗಂಧಾ ಪಿ ಮಾವಿನಕರ್ ಸೇರಿದಂತೆ ಇತರರು ಇದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

    ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

    ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

    "ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

    ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

    ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

    ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

    ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

    Download Eedina App Android / iOS

    X