ಆಪರೇಷನ್ ಕಮಲಕ್ಕೆ 6,500 ಕೋಟಿ ರೂ. ಬೇಕು, ಸುಮ್ಮನೇ ಆರೋಪ ಬೇಡ: ಪ್ರಲ್ಹಾದ್‌ ಜೋಶಿ

Date:

Advertisements

ನಾವು ಕಾಂಗ್ರೆಸ್‌ನ ಯಾವ ಶಾಸಕರಿಗೂ 100 ಕೋಟಿ ರೂ. ಆಫರ್ ಮಾಡಿಲ್ಲ. 65 ಶಾಸಕರನ್ನು ತೆಗೆದುಕೊಂಡರೆ ಮಾತ್ರ ಸರ್ಕಾರ ರಚನೆ ಸಾಧ್ಯ. ಹಾಗಾದರೆ 65 ಶಾಸಕರಿಗೆ 6,500 ಕೋಟಿ ರೂ. ಆಗಲಿದೆ. ಸುಮ್ಮನೇ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಆಪರೇಷನ್ ಕಮಲ ಕುರಿತ ಆರೋಪಗಳಿಗೆ ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಾನು ಬಿಜೆಪಿಯ ಕೇಂದ್ರದ ಸಚಿವನಾಗಿ ಬರೆದು ಕೊಡುತ್ತೇನೆ, ಯಾವ ಕಾಲಕ್ಕೂ ನಾವು ಸರ್ಕಾರಕ್ಕೆ ತೊಂದರೆ ಕೊಡಲ್ಲ. ಆದರೆ, ಸಿಎಂ ರಾಜೀನಾಮೆ ಕೇಳುತ್ತಿದ್ದೇವೆ” ಎಂದು ತಿಳಿಸಿದರು.

“ಮುಡಾ ಹಗರಣದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡದಿದ್ದರೆ ಸಿಬಿಐ ತನಿಖೆಗೆ ವಹಿಸಲಿ. ಅವರು ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಮುಡಾ ಹಗರಣದ ಎ-1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿದ್ದರಿಂದ ಇಲ್ಲಿಯ ಅಧಿಕಾರಿಗಳು ಅವರ ವಿರುದ್ಧ ಸರಿಯಾದ ತನಿಖೆ ಮಾಡಲ್ಲ. ಪರಿಣಾಮ ಸತ್ಯ ಹೊರ ಬರುವುದಿಲ್ಲ” ಎಂದು ಜೋಶಿ ಹೇಳಿದರು.

Advertisements

“ಇತ್ತೀಚೆಗಷ್ಟೇ ಲೋಕಾಯುಕ್ತಕ್ಕೆ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸಿಎಂ ವಿರುದ್ಧ ಲೋಕಾಯುಕ್ತ ಎಸ್‌ಪಿ ಆಗಲಿ ಕರ್ನಾಟಕ ಪೊಲೀಸ್ ಆಗಲಿ ಪಾರದರ್ಶಕ ತನಿಖೆ ನಡೆಸೋದು ಅಸಾಧ್ಯದ ಮಾತು. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಂಧನ ಕಾನೂನಿಗೆ ಬಿಟ್ಟ ವಿಷಯ. ಆದರೆ, ಅವರದ್ದೇ ಸರ್ಕಾರ ಇರುವುದರಿಂದ ಪ್ರಕರಣ ಸುದೀರ್ಘವಾಗಲಿದೆ. ನಮ್ಮ ಹೋರಾಟವೂ ಮುಂದುವರಿಯಲಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ನೈತಿಕವಾಗಿ ದಿವಾಳಿ ಎದ್ದಿದೆ” ಎಂದು ಕಿಡಿ ಕಾರಿದರು.

ಕುಮಾರಸ್ವಾಮಿ ಕಾಲು ಹಿಡಿದು ಸಿಎಂ ಮಾಡಿದ್ದು ಯಾರು?

“ಹೆಚ್ ​ಡಿ ಕುಮಾರಸ್ವಾಮಿ ಬೇಲ್ ಮೇಲೆ ಇರುವ ಬಗ್ಗೆ ಹಲವು ಬಾರಿ‌ ಹೇಳಿದ್ದೇನೆ. ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿರುವುದು 2008ರಲ್ಲಿ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿರಲಿಲ್ವಾ? ಆಗ ಯಾಕೆ ಕ್ರಮ ಕೈಗೊಳ್ಳಲಿಲ್ಲ? 2018ರಲ್ಲಿ ಹೆಚ್ ​ಡಿ ಕುಮಾರಸ್ವಾಮಿ ಅವರ ಕಾಲುಹಿಡಿದು ಅವರನ್ನು ಸಿಎಂ ಮಾಡಿದವರು ಯಾರು? ಆಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲ್ಲ ಎಂದಿದ್ದರು. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅದನ್ನು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದರು. 2008ರ ಕೇಸ್​​ನಲ್ಲಿ ರಾಜೀನಾಮೆ ಕೊಡಬೇಕು ಅಂತಾರಲ್ಲವೇ? ಈಗ ಸಿಎಂ ರಾಜೀನಾಮೆ ಕೊಡಲ್ಲ ಅನ್ನೋದು ಯಾವ ಲೆಕ್ಕ? ಹೆಚ್​ಡಿಕೆ ಅಥವಾ ನಮಗೆ ಅಷ್ಟೇ ಸಿಎಂ ಆಗಲು ಒಲವು ಇದೆಯಾ? ಕಾಂಗ್ರೆಸ್​​ನವರೆಲ್ಲಾ ಸನ್ಯಾಸಿಗಳಾ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X