ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ಕೋರಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಸುಮಾರು 16 ಪುಟಗಳ ದೂರನ್ನು ಇಡಿ ಇಲಾಖೆಯ ಬೆಂಗಳೂರು ಜಂಟಿ ನಿರ್ದೇಶಕರಿಗೆ ಸ್ನೇಹಮಯಿ ಕೃಷ್ಣ ಇಮೇಲ್ ಮಾಡಿದ್ದಾರೆ. ಅಂಚೆ ಮೂಲಕವೂ ದೂರು ಸಲ್ಲಿಸಿದ್ದಾರೆ.
“ಅಧಿಕಾರ ದುರುಪಯೋಗ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತನ್ನ ಪತ್ನಿ ಪಾರ್ವತಿ ಹೆಸರಲ್ಲಿ ಮುಡಾದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ರಾಜಕೀಯ ಪಿತೂರಿ: ಸಿಪಿಐ
ಇನ್ನು “ಇದೊಂದೆ ಅಲ್ಲ, ಮುಡಾದಂತಹ ಹಲವಾರು ಅಕ್ರಮಗಳು ನಡೆದಿವೆ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ತನಿಖೆ ನಡಸಬೇಕು” ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಈ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
