ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ ಮಾಡಿದ ಆರೋಪಿಯಾಗಿದ್ದು, ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಗಮ್ಮ ಹಾಗೂ ಪತಿ ಶೇಖರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವೂ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರ ಮಧ್ಯೆ ಜಗಳವಾಗಿದ್ದರಿಂದ ಹೆಂಡತಿ ತವರು ಮನೆಗೆ ಹೋಗಿ ಶನಿವಾರ ವಾಪಸ್ ಗಂಡನ ಮನೆಗೆ ಬಂದಿದ್ದಳು. ಶನಿವಾರ ರಾತ್ರಿ ಕೋಪ ಮತ್ತೆ ವಿಪರೀತಕ್ಕೆ ತಿರುಗಿ ಜಗಳದಲ್ಲಿ ಸಿಟ್ಟಿಗೆದ್ದ ಶೇಖರ್ ಹೆಂಡತಿ ಕತ್ತಿಗೆ ಕೊಡಲಿಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ನಾಗಮ್ಮ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ
ಸೇಡಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್‌ಐ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.