ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮುಡಾ ಪ್ರಕರಣ ಸಂಬಂಧ ಇ.ಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇ.ಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ
ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ದಸರಾ ಉತ್ಸವದ ಸಿದ್ಧತೆಗಳ ಪರ್ತಕರ್ತರಿಗೆ ಮಾಹಿತಿ ನೀಡುತ್ತಾ, ದಸರಾ ಉತ್ಸವಗಳ ಸಿದ್ದತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದರು.
