ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

Date:

Advertisements

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿನೋದ ರಾಠೋಡ್ ಭೇಟಿ ನೀಡಿ ವೃದ್ಧಾಪ್ಯ ವೇತನ ಮಂಜೂರಾತಿ ಪತ್ರ ಹಸ್ತಾಂತರಿಸಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾದ ಜೀಜಾಬಾಯಿ ಅವರು ನಿರ್ಗತಿಕ ಬದುಕಿನ ಸಂಕಟ ಕುರಿತು ʼಈದಿನ.ಕಾಮ್‌ʼ ನಲ್ಲಿ ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು? ಎಂಬ ಶೀರ್ಷಿಕೆಯಡಿ ಸೆ.20 ರಂದು ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಜೀಜಾಬಾಯಿ ಮನೆಗೆ ದೌಡಾಯಿಸಿ ಸಮಸ್ಯೆ ಆಲಿಸಿದ್ದಾರೆ.

ʼಈದಿನ.ಕಾಮ್‌ʼ ವರದಿಗೆ ಎಚ್ಚೆತುಕೊಂಡ ಕಂದಾಯ ಇಲಾಖೆಯ ಅಧಿಕಾರಿಗಳು ಸೆ.25 ರಂದು ಬೆಳಿಗ್ಗೆ ರಾಚಪ್ಪ ಗೌಡಗಾಂವ್‌ ಗ್ರಾಮದ ವೃದ್ಧೆ ಜೀಜಾಬಾಯಿ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದ್ದಾರೆ. ವೃದ್ಧಾಪ್ಯ ವೇತನಕ್ಕೆ ಬೇಕಾದ ಅಗತ್ಯ ದಾಖಲೆ ಪಡೆದು ಕಚೇರಿಗೆ ತೆರಳಿದ್ದರು. ಅದೇ ದಿನ ವೃದ್ಧಾಪ್ಯ ವೇತನ ಮಂಜೂರು ಮಾಡಿ ಪುನಃ ಗ್ರಾಮಕ್ಕೆ ಹೋಗಿ ಅಜ್ಜಿಯ ಕೈಗೆ ಮಂಜೂರಾತಿ ಪತ್ರ ನೀಡಿದ್ದಾರೆ.

Advertisements

ಜೀಜಾಬಾಯಿಗೆ ಓರ್ವ ಮಗನಿದ್ದ, ಆತ ಎಂಟತ್ತು ವರ್ಷದ ಹಿಂದೆ ಸಾವನಪ್ಪಿದ್ದಾನೆ, ಸೊಸೆ ಬೇರೆ ಕಡೆ ವಾಸವಾಗಿದ್ದಾರೆ. ಸಕ್ಕರೆ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಂಡನನ್ನು ಕಳೆದುಕೊಂಡ ಜೀಜಾಬಾಯಿ, ಸದ್ಯ ತಗಡಿನ ಶೀಟ್ ಇರುವ ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದಾರೆ. ಅಜ್ಜಿಗೆ 64 ವರ್ಷದವಾದರೂ ʼಕಷ್ಟ ಎಲ್ಲರಿಗೂ ಬರುತ್ತದೆʼ ಎಂದು ಹೆದರದೇ ಕೂಲಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ಅಧಿಕಾರಿಗಳು ಇಚ್ಚಾಶಕ್ತಿ ತೋರಿ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾಷಣ ಮಾಡುವಾಗಲೇ ಅಸ್ವಸ್ಥರಾದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಎರಡು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ವಂಚಿತಳಾಗಿ ಸಂಕಷ್ಟದ ಬದುಕು ದೂಡುತ್ತಿದ್ದ ಅಜ್ಜಿಯ ಮನೆಯ ಕಡೆಗೆ ತಿರುಗಿ ನೋಡದ ಅಧಿಕಾರಿಗಳು ʼಈದಿನ.ಕಾಂʼ ವರದಿಗೆ ಸ್ಪಂದಿಸಿ ಒಂದೇ ದಿನದಲ್ಲಿ ವೃದ್ಧಾಪ್ಯ ಪಿಂಚಣಿ ಮಂಜೂರು ಮಾಡಿದ್ದಾರೆ. ಕಂದಾಯ ಅಧಿಕಾರಿಗಳ ಕಾರ್ಯವೈಖರಿಗೆ ಜನ ಭೇಷ್ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X