“ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮಿನಾರಾಯಣ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರು ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ಸಭೆಯನ್ನು ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಗದ್ದಲ ಶುರುವಾಗಿ ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದರು.
ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ಼್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪ್ರತಿಕ್ರಿಯಿಸಿರುವ ಸಚಿವ ಕೆಚ್ ಮುನಿಯಪ್ಪ, “ಇದು ನಡೆಯಬಾರದಿತ್ತು, ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯ ಹಿಂದೆ ಯಾರು ಇದ್ದಾರೆ ಎಂಬುವುದು ನನಗೆ ಗೊತ್ತಿದೆ. ಈ ಕುರಿತು ನಾನು ಕಾಂಗ್ರೆಸ್ ಪ್ರದೇಶ ಸಮಿತಿಗೆ ದೂರು ನೀಡುತ್ತೇನೆ” ಎಂದು ತಿಳಿಸಿದ್ದಾರೆ.
“ಚಿಕ್ಕ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಬಾರದಾಗಿತ್ತು.ಒ ಬ್ಬ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ಖಂಡನೀಯ. ಅಧ್ಯಕ್ಷರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ಪ್ರದೇಶ ಸಮಿತಿಗೆ ಅಪಮಾನ ಮಾಡಿದಂತಾಗುತ್ತದೆ. ನಿಜವಾದ ಕಾಂಗ್ರೆಸ್‌ನವರು ಆಗಿದ್ದಿದ್ದರೆ ಈ ರೀತಿಯಲ್ಲಿ ಮಾಡುತ್ತಿರಲಿಲ್ಲ. ಈ ಘಟನೆಯಿಂದ ನನಗೆ ಸಾಕಷ್ಟು ನೋವಾಗಿದೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಕೋಲಾರ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಗಲಾಟೆ, ಕೈ ಕೈ ಮಿಲಾಯಿಸಿದ ಮುಖಂಡರು
“ಇನ್ನೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ರಾಜ್ಯದ ಗಮನ ಸೆಳೆದಿದೆ. ಈ ರೀತಿ ಮಾಡಿರುವುದು ಇದಕ್ಕೆ ಪ್ರೋತ್ಸಾಹ ಮಾಡಿರುವುದು ಸರಿಯಲ್ಲ. ದೊಡ್ಡ ಪಕ್ಷದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ಅದನ್ನು ಕುಳಿತು ಬಗೆಹರಿಸಿಕೊಳ್ಳಬೇಕು. ಆದರೆ ಈ ಮಟ್ಕ್ಕೆ ಅಧ್ಯಕ್ಷರ ಮೇಲೆ ಕೈ ಮಾಡಿದಿರುವುದು ಖಂಡನೀಯ. ಇದರಲ್ಲಿ ಯಾರ ಪಾತ್ರ ಇದೆ ಎಂಬುದು ನನಗೆ ಗೊತ್ತಿದೆ. ಅವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಗಮನಕ್ಕೆ ಮುಟ್ಟಿಸುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.
