ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Date:

Advertisements

ಡಿಸ್ಕೋ ಡ್ಯಾನ್ಸರ್, ಡ್ಯಾನ್ಸ್ ಡ್ಯಾನ್ಸ್, ಸುರಕ್ಷಾ ಮೊದಲಾದ ಸಿನಿಮಾಗಳ ಮೂಲಕ ಪ್ರಸಿದ್ಧರಾದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಚಲನಚಿತ್ರ ಕ್ಷೇತ್ರದಲ್ಲಿ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಎಕ್ಸ್‌ನಲ್ಲಿ ಇದರ ಘೋಷಣೆಯನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಹಿರಿಯ ನಟ ಮಿಥುನ್ ಚಕ್ರವರ್ತಿಗೆ ತೀವ್ರ ಎದೆನೋವು : ಆಸ್ಪತ್ರೆಗೆ ದಾಖಲು

Advertisements

“ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಗೌರವ ಪಡುತ್ತೇನೆ” ಎಂದು ಸಚಿವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಕ್ಟೋಬರ್ 8ರಂದು ನಡೆಯುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಚಕ್ರವರ್ತಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ವೈಷ್ಣವ್ ತಿಳಿಸಿದ್ದಾರೆ.

74 ವರ್ಷದ ಚಕ್ರವರ್ತಿ ಅವರು ಅವರ 1976ರ ಚಲನಚಿತ್ರ ‘ಮೃಗಯಾ’ ಸಿನಿಮಾದ ಮೂಲಕ ನಟನೆ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಈ ಸಿನಿಮಾಕ್ಕಾಗಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯೂ ಲಭಿಸಿದೆ.

ಅವರು ‘ಕಸಂ ಪೈದಾ ಕರ್ನೆ ವಾಲೆ ಕಿ’ ಮತ್ತು ‘ಕಮಾಂಡೋ’ ಸಿನಿಮಾದಲ್ಲಿಯೂ ತಮ್ಮ ನಟನೆಯ ಮೂಲಕ ಹೆಸರು ಪಡೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X