ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಅಕ್ಟೋಬರ್ 22 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರ ವಿರುದ್ದ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.ಈ ಬೆನ್ನಲ್ಲೆ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಕಾನೂನು ಘಟಕ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಮುಂದಿನ ವಿಚಾರಣೆ ತನಕ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ‘ಲಾಪತಾ ಲೇಡೀಸ್’
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಮುಂದಾಗಿತ್ತು. ಇದರ ನಡುವೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ದೂರುದಾರ ಆದರ್ಶ್ ಅಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಕಲಾತ್ತು ವಹಿಸಿದ್ದರು. ನಳಿನ್ ಕುಮಾರ್ ಕಟೀಲ್ ಪರ ರಾಘವನ್ ವಾದ ಮಂಡಿಸಿದರು.
