ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದೂರು ದಾಖಲಿಸಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಕಚೇರಿಗೆ ದೂರು ದಾಖಲಿಸಿದ್ದು, ದೂರು ದಾಖಲಿಸಿರುವುದಕ್ಕೆ ಇಡಿ ಅಧಿಕಾರಿಗಳು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್‌ನಲ್ಲಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ(ಮುಡಾ) ಸಿದ್ದರಾಮಯ್ಯ ಅವರ ಪತ್ನಿಗೆ ನೀಡದ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.
