ಸಿಡಿಲು ಬಡಿದ ಪರಿಣಾಮ ಕುರಿಗಾಯಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಹೊರವಲಯದಲ್ಲಿ ಸೋಮವಾರ ನಡೆದಿದೆ.
ಲಿಂಗಸಗೂರು ತಾಲ್ಲೂಕಿನ ಕರಡಕಲ್ ಗ್ರಾಮದ ನಿವಾಸಿ ದುರುಗಪ್ಪ (35) ಮೃತರು ಎಂದು ತಿಳಿದು ಬಂದಿದೆ.
ಸೋಮವಾರ ಎಂದಿನಂತೆ ಕುರಿ ಮೇಯಿಸಲು ತೆರಳಿದ್ದರು. ಮಧ್ಯಾಹ್ನ ಕುರಿಗಳಿಗೆ ನೀರು ಕುಡಿಸಲು ಹೋಗಿದಾಗ ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ ಪ್ರಕರಣ : ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದೆ.
