ಸೈಟ್ ವಾಪಸ್ ಮಾಡಿ ಮತ್ತೆ ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿದ್ದರಾಮಯ್ಯ: ಬೊಮ್ಮಾಯಿ

Date:

Advertisements

ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮುಡಾ ಸೈಟ್ ವಾಪಸ್ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ” ಎಂದರು.

“ಸೈಟ್‌ ವಾಪಸ್ ಮಾಡಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ಸೈಟ್ ವಾಪಸ್ ಮಾಡುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ. ಎಫ್ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್ ಐ ಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಮೊದಲು ಕಾಂಗ್ರೆಸ್ ನಾಯಕರು ತಪ್ಪೇ ನಡೆದಿಲ್ಲ ಎನ್ನುತ್ತಿದ್ದರು. ಈಗ ಸೈಟ್ ವಾಪಸ್ ಕೊಟ್ಟು ತಪ್ಪಾಗಿದೆ ಅನ್ನುವುದನ್ನು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ನಿವೇಶನ ವಾಪಸಾತಿ ರಾಜಕೀಯ ನಾಟಕ, ಯಾವುದೇ ಕ್ಷಣದಲ್ಲಿ ಸಿಎಂ ರಾಜೀನಾಮೆ: ವಿಜಯೇಂದ್ರ

“ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ನೆನಪಿಸಿಕೊಳ್ಳಲಿ. ಆಗ ಯಡಿಯೂರಪ್ಪ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಅಂತ ಹೇಳಿದ್ದರು. ಈಗ ಇದೇ ಮಾತು ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್ ನೊಂದಿಗೆ ಅಕ್ರಮ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಸೈಟು ಹಂಚಿಕೆ ಕಾನೂನುಬಾಹಿರವಾಗಿ ಆಗಿದೆ ಅನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X