ಬೆಳಗಾವಿ | ವಿದ್ಯಾರ್ಥಿಗಳು ಗಾಂಧಿಯವರ ಆದರ್ಶ ಅಳವಡಿಸಿಕೊಳ್ಳಬೇಕು: ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ

Date:

Advertisements

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗಾಂಧಿಯವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ ಕರೆ ನೀಡಿದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಸಾಪದಿಂದ ನಗರದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಓದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಯ ಮುಖ್ಯ ಶಿಕ್ಷಕ ಎಂ ಎಚ್ ಚಾಬುಕಸ್ವಾರ ಮಾತನಾಡಿ, “ಗಾಂಧೀಜಿ ಇಡೀ ಜಗತ್ತಿಗೆ ಶಾಂತಿ ಮತ್ತು ಸಹೋದರತೆಯನ್ನು ಸಾರಿದವರು. ಅವರ ಸ್ಮರಣೆಗಾಗಿ ವಿಶ್ವಸಂಸ್ಥೆ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ” ಎಂದು ಎಂದರು.

Advertisements

ಶಿಕ್ಷಣ ಸಂಯೋಜಕ ಶ್ರೀಕಾಂತ ಕರಲಿಂಗಪ್ಪನವರ ಮಾತನಾಡಿ, “ಗಾಂಧೀಜಿಯವರು ಪ್ರಾಮಾಣಿಕತೆ ಹಾಗೂ ಸತ್ಯ ನುಡಿಯುವುದನ್ನು ವಿದ್ಯಾರ್ಥಿ ದೆಸೆಯಿಂದಲೇ ರೂಢಿಸಿಕೊಂಡಿದ್ದರು. ಪ್ರಸ್ತುತ ವಿದ್ಯಾರ್ಥಿಗಳೂ ಕೂಡ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಜನರ ನೋವಿಗೆ ಮಾಧ್ಯಮ ದನಿಯಾಗಲಿ : ಭರತ್‌ ಹೆಬ್ಬಾಳ

ಗಾಂಧಿ ಓದು ನಿಮಿತ್ಯ ಗಾಂಧೀಜಿಯ ಜೀವನ, ಸಾಧನೆ ಕುರಿತು ಬೋಳುವಾರು ಮಹಮ್ಮದ್ ಕುಂಞ ಅವರು ಮಕ್ಕಳಿಗಾಗಿ ಬರೆದ ಪಾಪು ಬಾಪು ಕೃತಿಯನ್ನು 26 ಮಂದಿ ವಿದ್ಯಾರ್ಥಿಗಳು ವಾಚನ ಮಾಡಿದರು.

ವೇದಿಕೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿನಾಯಕ ಪಾಟೀಲ, ಅರಣ್ಯಾಧಿಕಾರಿ ಪ್ರತಿಭಾ ಕೊಪ್ಪಳ, ಗೌರವ ಕೋಶಾಧ್ಯಕ್ಷ ಎಸ್ ಎಸ್ ಹುಚ್ಚನ್ನವರ, ಆರ್ ಎಸ್ ಸಂಕನ್ನವರ, ಅರಣ್ಯ ಇಲಾಖೆಯ ಆನಂದ ಮಸಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X