ರಾಮನಗರ | ಕಂದಾಯ ಇಲಾಖೆ ಮುಷ್ಕರ; ಸರ್ಕಾರದ ನಿರ್ಲಕ್ಷ್ಯಕ್ಕೆ ವ್ಯಾಪಕ ವಿರೋಧ, ಪ್ರಗತಿಪರ ಸಂಘಟನೆಗಳ ಬೆಂಬಲ

Date:

Advertisements

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯ, ಹಾಗೂ ಸೇವಾ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಕಂದಾಯ ಇಲಾಖೆ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಕನಕಪುರದ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಘೋಷಿಸಿದರು.

ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕಂದಾಯ ಇಲಾಖೆ ಅಧಿಕಾರಿಗಳಿಗೆ ಮೊಬೈಲ್ ಆಪ್‌ಗಳಲ್ಲಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡ ನಿಲ್ಲಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅನಿರ್ದಿಷ್ಟಾವಧಿಯ ಧರಣಿ ಸರಿಯಾಗಿದೆ.ಕಂದಾಯ ಇಲಾಖೆಯ ಅಧಿಕಾರಿಗಳ ಬೇಡಿಕೆಗಳು ನ್ಯಾಯಯುತವಾಗಿವೆ. ಅವುಗಳನ್ನು ತಕ್ಷಣ ಪರಿಹರಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮುಂದಾಗಬೇಕು. ಕಂದಾಯ ಸಚಿವರ ಮೇಲೆ ಅಗಾಧ ನಿರೀಕ್ಷೆ ಇಡಲಾಗಿತ್ತು. ಸಚಿವರು ಇತ್ತ ಅಧಿಕಾರಿಗಳಿಗೂ, ಅತ್ತ ರೈತರಿಗೂ ಬಿಸಿ ತುಪ್ಪವಾಗಿದ್ದಾರೆ” ಎಂದು ಹೇಳಿದರು

“ಕಂದಾಯ ಇಲಾಖೆಯ ನೌಕರರು ಕಳೆದ 4 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಬಹು ಮುಖ್ಯ ಇಲಾಖೆಯಾದ ಕಂದಾಯ ಕಚೇರಿಗೆ ನಿತ್ಯವೂ ರೈತರು, ಜನಸಾಮಾನ್ಯರು ಸಾವಿರಾರು ರೂ ಹಣ ವ್ಯಯಿಸಿ ಬಂದರೂ ಅಧಿಕಾರಿಗಳು ಇರದ ಕಾರಣ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತ ತೆರಳುತ್ತಿದ್ದಾರೆ. ಇತ್ತ ಸಚಿವರು ಇದರ ಪರಿವೆಯೇ ಇಲ್ಲದಂತೆ ಮುಖ್ಯಮಂತ್ರಿಗಳ ಮುಡಾ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತ ಟೀಕೆಯಲ್ಲಿ ಕಾಲ ಕಳೆಯುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

ಗ್ಯಾರಂಟಿ ಯೋಜನೆಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇತ್ತ ಗ್ಯಾರಂಟಿಗಳನ್ನೂ ನೀಡಲಾಗದೆ, ಅತ್ತ ಅಭಿವೃದ್ಧಿಯನ್ನೂ ಮಾಡಲಾಗದೆ ಜನರನ್ನು ತ್ರಿಶಂಕು‌ ಸ್ಥಿತಿಯಲ್ಲಿ ನರಳಾಡುವಂತೆ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಬಹುಮುಖ್ಯ: ಆಂತೋನಿ ಸಿ

“ನೂತನ ಜಿಲ್ಲಾಧಿಕಾರಿಗೆ ಪ್ರತಿಭಟನೆ ಎಂದರೆ ಅಲರ್ಜಿ. ಕಂದಾಯ ಇಲಾಖೆಯ ಅಧಿಕಾರಿಗಳ ಮುಷ್ಕರಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಕಣ್ಣಿಗೆ ಕಾಣದಷ್ಟು ದೂರದಲ್ಲಿ ಅದಕ್ಕೆಂದೇ ಪ್ರತಿಭಟನೆಯನ್ನು ವರ್ಗಾಹಿಸಿ ಆರಾಮಾಗಿದ್ದಾರೆ. ರಾಮನಗರವು ಇಂತಹ ಅಸಮರ್ಥ ಜಿಲ್ಲಾಧಿಕಾರಿಯನ್ನು ಈವರೆಗೂ ಕಂಡಿರಲಿಲ್ಲ. ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ನೋಡಿಯಾದರೂ ಕಂದಾಯ ಇಲಾಖೆಯ ಅಧಿಕಾರಿಗಳ ಮನ ಒಲಿಸಲಿ, ಇಲ್ಲದಿದ್ದರೆ ಪ್ರಗತಿಪರ ಸಂಘಟನೆಗಳು ಜನರಿಗಾಗುತ್ತಿರುವ ಸಮಸ್ಯೆಗಳ ವಿರುದ್ದ ಬೀದಿಗಿಳಿದು ಹೋರಾಡಲು ಸಿದ್ದರಿದ್ದೇವೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X