- ₹5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶ
- ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ₹15 ಕೋಟಿ ದಾಸ್ತಾನು
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 10ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ವೇಳೆ, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಫಂಡ್ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರುಗಳು ಬಂದ ಹಿನ್ನೆಲೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ದಾಳಿ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆಲ ಅಭ್ಯರ್ಥಿಗಳು ಬರೋಬ್ಬರಿ ₹15 ಕೋಟಿ ಮೌಲ್ಯದ ಸಂಪತ್ತನ್ನು ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ದಾಸ್ತಾನು ಮಾಡಲಾಗಿತ್ತು ಎನ್ನಲಾಗಿದೆ. ಇದೀಗ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ₹15 ಕೋಟಿ ಹಣ ಹಾಗೂ ಸುಮಾರು ₹5 ಕೋಟಿ ಬೆಲೆಬಾಳುವ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೋದಿ ರೋಡ್ ಶೋಗಾಗಿ ನೂರಾರು ಮರಗಳ ಮಾರಣಹೋಮ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಶಾಂತಿನಗರ, ಶಿವಾಜಿನಗರ, ಆರ್ಎಂವಿ ಬಡಾವಣೆ, ಕಾಕ್ಸ್ಟೌನ್, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುವ ಆರೋಪಗಳು ಕೇಳಿಬರುತ್ತವೆ.