ಮತ್ತೆ ಭುಗಿಲೆದ್ದ ಮಣಿಪುರ ಹಿಂಸಾಚಾರ; ನಾಲ್ವರು ಗುಂಡೇಟಿಗೆ ಬಲಿ, ಅಧಿಕಾರಿ ಹತ್ಯೆ

Date:

Advertisements
  • ಮಣಿಪುರ ಹಿಂಸಾಚಾರ ಘಟನೆಯಲ್ಲಿ 54 ಮಂದಿ ಸಾವು
  • ಎಸ್‌ಟಿ ಸ್ಥಾನಮಾನಕ್ಕೆ ಆಗ್ರಹಿಸಿರುವ ಮೇಟಿ ಸಮುದಾಯ

ಮಣಿಪುರ ಹಿಂಸಾಚಾರ ಶನಿವಾರ (ಮೇ 6) ಮತ್ತೆ ಭುಗಿಲೆದ್ದಿದೆ. ಚುರಾಚಂದ್‌ಪುರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ವೇಳೆ ಮಾಡಿರುವ ಗುಂಡಿನ ದಾಳಿಗೆ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ.

ಪ್ರದೇಶದಲ್ಲಿ ಮೇಟಿ ಸಮುದಾಯದ ತೆರವು ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ಚುರಾಚಂದ್‌ಪುರದಲ್ಲಿ ಮೇಟಿ ಸಮುದಾಯದ ತೆರವು ಕಾರ್ಯಾಚರಣೆ ವೇಳೆ ಸಮುದಾಯದ ನಾಯಕರು ಅಡ್ಡಿಪಡಿಸಿದಾಗ ಗುಂಡು ಹಾರಿಸಲಾಗಿದೆ.

ಮಣಿಪುರ ಹಿಂಸಾಚಾರದ ವೇಳೆ ಇಂಫಾಲದಲ್ಲಿ ತೆರಿಗೆ ಸಹಾಯಕರಾದ ಲೆಟ್ಮಿಂಥಂಗ್‌ ಹಾವೊಕಿಪ್‌ ಎಂಬುವವರ ಹತ್ಯೆಯಾಗಿದೆ ಎಂದು ಭಾರತೀಯ ಕಂದಾಯ ಸೇವೆಯ (ಐಆರ್‌ಎಸ್) ಸಂಘಟನೆ ಹೇಳಿದೆ.

ರಾಜ್ಯದ ಬಹುಸಂಖ್ಯಾತ ಮೇಟಿ ಸಮುದಾಯ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಮೇ 3ರಿಂದ ರಾಜ್ಯದಲ್ಲಿ ಸಂಘರ್ಷ ನಡೆಯುತ್ತಿದೆ.

ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಸೇನೆ ಮತ್ತು ಸರ್ಕಾರ ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದಾಗ, ಶನಿವಾರ ಮತ್ತೆ ಹಿಂಸಾಚಾರ ನಡೆದಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ರಾಜಧಾನಿ ಇಂಪಾಲದಲ್ಲಿ ಕುಕಿ ಸಮುದಾಯ ಹಿಂಸಾಚಾರಕ್ಕೆ ಗುರಿಯಾಗುತ್ತಿದ್ದಾರೆ. ಬುಡಕಟ್ಟು ಸಮುದಾಯ ಅಧಿಕವಾಗಿರುವ ಸ್ಥಳಗಳಲ್ಲಿ ಮೇಟಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ.

ಟಿಡಿಮ್‌ ರೋಡ್‌ ಎಂಬಲ್ಲಿ ನೂರಾರು ಜನರು ತೆರವು ಕಾರ್ಯಾಚರಣೆ ವಿರೋಧಿಸಿದರು. ರಕ್ಷಣಾ ಪಡೆಗಳು ಗುಂಡು ಹಾರಿಸದಂತೆ ತಡೆಯಲು ಎದುರಿಗೆ ಮಹಿಳೆಯರನ್ನು ನಿಲ್ಲಿಸಲಾಗಿತ್ತು. ಆದರೂ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಈ ಹಿಂದೆ ಗ್ರಾಮವೊಂದರಲ್ಲಿ ಕೆಲವು ಜನರು ಬೆಂಕಿ ಹಚ್ಚುತ್ತಿರುವುದನ್ನು ತಡೆದ ಸಿಆರ್‌ಪಿಎಫ್‌ ಪೇದೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಹಿಂಸಾಚಾರಕ್ಕೆ 54 ಮಂದಿ ಬಲಿ

ಮಣಿಪುರ ಹಿಂಸಾಚಾರಕ್ಕೆ ಈವರೆಗೆ 54 ಮಂದಿ ಬಲಿಯಾಗಿದ್ದಾರೆ. ಗಲಭೆಯಲ್ಲಿ ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಶನಿವಾರ ಅಧಿಕಾರಿಗಳು ಅಧಿಕೃತ ವಿವರ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇಂಫಾಲ ನಗರದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು, ಅಂಗಡಿಗಳು ಮತ್ತು ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹ ಆರಂಭವಾಗಿದೆ.

ಇಂಫಾಲದ ಪ್ರಮುಖ ಪ್ರದೇಶಗಳು ಮತ್ತು ರಸ್ತೆಗಳಲ್ಲಿ ಹೆಚ್ಚಿನ ಸೇನಾ ಪಡೆಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮೂಲಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಹಿಂಸಾಚಾರದಲ್ಲಿ ಮೃತಪಟ್ಟವರ ಪೈಕಿ 16 ಶವಗಳನ್ನು ಚುರಾಚಂದ್‌ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳು ಇಂಫಾಲ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಶುಕ್ರವಾರ ರಾತ್ರಿ ಚುರಾಚಂದ್‌ಪುರ ಜಿಲ್ಲೆಯಲ್ಲಿ ಬಂಡುಕೋರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಐವರು ಗುಡ್ಡಗಾಡು ಮೂಲದ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಭಾರತೀಯ ಮೀಸಲುಪಡೆಯ ಬೆಟಾಲಿಯನ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಮ್ಮು ಮತ್ತು ಕಾಶ್ಮೀರ | ಉಗ್ರರ ಬಾಂಬ್ ದಾಳಿಗೆ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

ಹೈಕೋರ್ಟ್ ಆದೇಶದಂತೆ ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವುದನ್ನು ವಿರೋಧಿಸಿ ಬುಡಕಟ್ಟು ಸಮುದಾಯ ಹೋರಾಟ ಮಾಡುತ್ತಿರುವುದು ಹಾಗೂ ಬುಡಕಟ್ಟು ಸಮುದಾಯಗಳನ್ನು ಅರಣ್ಯ ಪ್ರದೇಶಗಳಿಂದ ತೆರವು ಮಾಡಲು ಸರ್ಕಾರ ಈಚೆಗೆ ತೆಗೆದುಕೊಂಡಿರುವ ಕ್ರಮಗಳು ಸಂಘರ್ಷಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಬಿಜೆಪಿ ಸರ್ಕಾರದ ನಾಯಕರ ಅಲಕ್ಷ್ಯ ಸಂಬಂಧ ಟೀಕೆ

ಮಣಿಪುರದಲ್ಲಿ ಹಿಂಸಾಚಾರ ವರದಿಯಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಅತ್ತ ಗಮನ ಹರಿಸದೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಂಗಳೂರಿನಲ್ಲಿ ರಸ್ತೆ ಮೆರವಣಿಗೆ ಮೂಲಕ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಅಂತರ್ಜಾಲದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ವ್ಯವಹಾರಗಳ ಪ್ರೊಫೆಸರ್ ಅಶೋಕ್ ಸ್ವೇನ್ ಈ ಬಗ್ಗೆ ಟ್ವೀಟ್ ಮಾಡಿ ಖಂಡಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಅವರು ಮಣಿಪುರ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ನಾಟಕದ ರ‍್ಯಾಲಿ ರದ್ದುಗೊಳಿಸಿದ್ದಾರೆ ಎಂದು ಶುಕ್ರವಾರ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಸತ್ಯಶೋಧನಾ ತಂಡ ‘ಆಲ್ಟ್‌ ನ್ಯೂಸ್‌’ನ ಮೊಹಮ್ಮದ್ ಝುಬೇರ್ ಅವರು ಟ್ವಿಟರ್‌ನಲ್ಲಿ ಸತ್ಯಾಂಶವನ್ನು ಬಹಿರಂಗಪಡಿಸಿ, ಅಮಿತ್ ಶಾ ಶನಿವಾರ ಕರ್ನಾಟಕದ ಸವದತ್ತಿ ಎಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿರುವುದನ್ನು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X