ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ, ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿದರು.
ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಿ, ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹಂದಿಗಳ ಜೊತೆ ಗುದ್ದಾಡಿದರೆ ಮೈಯೆಲ್ಲಾ ಕೊಚ್ಚೆಯಾಗುತ್ತದೆಂಬ ಕೀಳು ಪದಗಳನ್ನು ಬಳಸಿದ್ದಾರೆ. ಕೇಂದ್ರ ಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ದುರಹಂಕಾರದ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಪಡಿಸಿ ತನಿಖೆ ಒಳಪಡಿಸುವಂತೆ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ
ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ದಾವಣಗೆರೆ ಜಿಲ್ಲಾ ಉಸ್ತುವಾರಿ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ಉಪಾಧ್ಯಕ್ಷ ಮಠದಟ್ಟಿ ವೀರಣ್ಣ, ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಉಪಾಧ್ಯಕ್ಷ ಮಠದಟ್ಟಿ ವೀರಣ್ಣ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಯುವ ಘಟಕದ ಜಿಲ್ಲಾಧ್ಯಕ್ಷ ಓ. ಪ್ರತಾಪ್‍ಜೋಗಿ, ಮಂಜಣ್ಣ, ನಗರಸಭೆ ಸದಸ್ಯರುಗಳಾದ ದೀಪು, ನಸ್ರುಲ್ಲಾ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ಬು, ವೀರಭದ್ರಣ್ಣ, ಕರಿಬಸಪ್ಪ, ರುದ್ರಣ್ಣ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
