ದೆಹಲಿಯ ಜೈತ್‌ಪುರ ನಗರದ ನೀಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.ಜಾವೇದ್ ಹತ್ಯೆಯಾದ ವೈದ್ಯರು.
ಗಾಯಗೊಂಡು ಚಿಕಿತ್ಸೆ ಪಡೆಯುವ ನೆಪದಲ್ಲಿ ಇಬ್ಬರು ಆಸ್ಪತ್ರೆಯೊಳಗೆ ಪ್ರವೇಶಿಸಿದ್ದಾರೆ. ಡ್ರೆಸ್ಸಿಂಗ್ ನಂತರ ವೈದ್ಯ ಜಾವೇದ್ ಅವರನ್ನು ಭೇಟಿಯಾಗಲು ಆಸ್ಪತ್ರೆ ಸಿಬ್ಬಂದಿಯನ್ನು ಒತ್ತಾಯಿಸಿದ್ದಾರೆ. ಸಿಬ್ಬಂದಿ ಬಿಡದಿದ್ದರೂ ಬಲವಂತವಾಗಿ ಕ್ಯಾಬಿನ್‌ಗೆ ಪ್ರವೇಶಿಸಿ ವೈದ್ಯರನ್ನು ಗುಂಡಿಕ್ಕಿ ಕೊಂದಿದ್ದಾರೆ.
ಸಿಬ್ಬಂದಿ ಹೇಳಿಕೆ ಪ್ರಕಾರ ಮೊದಲು ದುಷ್ಕರ್ಮಿಗಳ ಡ್ರೆಸ್ಸಿಂಗ್ ಮಾಡಲಾಯಿತು. ಇದಾದ ನಂತರ ವೈದ್ಯರನ್ನು ಕಾಣಬೇಕು ಎಂದು ಹೇಳಿದರು. ಇಬ್ಬರೂ ವೈದ್ಯರ ಕ್ಯಾಬಿನ್‌ಗೆ ಬಲವಂತವಾಗಿ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.ಆಸ್ಪತ್ರೆಯು ಕಾಳಿಂದಿ ಕುಂಜ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ.
ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ
