ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.
ಉದ್ಯಮಿ ಹಾಗೂ ಜೆಡಿಎಸ್‌ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ
ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಅ. 2ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುಮಾರಸ್ವಾಮಿಯವರ ವಿರುದ್ಧ ಇದೇ ರೀತಿ ಆರೋಪ ಮಾಡಿದ್ದ ವಿಜಯ್ ಟಾಟಾ, ಅದೇ ದಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

Nice Information