ದಾವಣಗೆರೆ | ಗಾಂಧಿ ಜಯಂತಿ ಆಚರಣೆ

Date:

Advertisements

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್ ಹೆಗಡೆ ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಸ್ವಚ್ಛತಾ ಸೇವಾ ದಿವಸ್ ನಿಮಿತ್ತ ಶ್ರಮದಾನ ನಡೆಸಿ, ಮಾನವ ಸರಪಳಿ, ಚಿಂತನ ಮಂಥನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ನಾವೆಲ್ಲರೂ ಜೀವನದಲ್ಲಿ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಮೂಲಕ ನ್ಯಾಯ ಮತ್ತು ಸೌಹಾರ್ದತೆಯ ಜಗತ್ತಿನ ನಿರ್ಮಾಣಕ್ಕೆ ಶ್ರಮಿಸಬೇಕು. ಸರಳತೆ ಮತ್ತು ಸತ್ಯದ ಮಹತ್ವನ್ನು ಕಲಿಸಿದ ಮಹಾತ್ಮಾ ಗಾಂಧಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ತತ್ವಗಳಿಗೆ ಬದ್ದರಾಗಿರೋಣ. ವೈಯಕ್ತಿಕ ಯೋಗಕ್ಷೇಮ ಮತ್ತು ರಾಷ್ಟ್ರೀಯ ಪ್ರಗತಿ ಎರಡಕ್ಕೂ ಸ್ವಚ್ಛತೆ ಅತ್ಯಗತ್ಯವೆಂದು ಗಾಂಧೀಜಿ ಬಲವಾಗಿ ನಂಬಿದ್ದರು” ಎಂದು ಹೇಳಿದರು.

Advertisements

“2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ ಹೆಚ್ ಅಣ್ಣಯ್ಯನವರು ಮಾತನಾಡಿ, “ಗಾಂಧಿಜೀಯವರು ಹಲವಾರು ಚಳುವಳಿಗಳ ಮೂಲಕ ಶಾಂತಿಯುತ ಹೋರಾಟ ಕಟ್ಟಿ, ಶಾಂತಿ ಮತ್ತು ಅಹಿಂಸಾ ಮಾರ್ಗಗಳ ಮೂಲಕ ಸ್ವಾತಂತ್ರ್ಯ ಸಾಧಿಸಿದ್ದು, ಜಗತ್ತಿನ ಇತಿಹಾಸವಾಗಿದೆ” ಎಂದು ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಬಿ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧಿಜೀಯವರು ತಮ್ಮ ಬದುಕು ಹಾಗೂ ಚಿಂತನೆಗಳಲ್ಲಿ ನುಸುಳಿದ ಹಲವು ಬಗೆಯ ವೈರುಧ್ಯಗಳಿಗೆ ಸ್ವತಃ ಪರೀಕ್ಷೆಗೆ ಒಳಪಡಿಸಿಕೊಂಡ ಸ್ವಪರೀಕ್ಷಕ. ಆಳವಾಗಿ ಚಿಂತಿಸಿ ಪ್ರಯೋಗ ಮಾಡಿದ ಪ್ರಯೋಗ ಶೀಲ. ಒಟ್ಟಾರೆ ಅವರನ್ನು ಬಣ್ಣಿಸಲು ಹೊರಟರೆ ಅವರ ವ್ಯಕ್ತಿತ್ವದ ಹಲವು ಮುಖಗಳ ಪರಿಚಯವಾಗುತ್ತದೆ” ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣ್‌ಕುಮಾರ್ ಮಾತನಾಡಿ, “ಗಾಂಧಿಯವರು ಕಾನೂನು ಕಲಿತು ಸ್ಪಷ್ಟವಾಗಿ ಯೋಚಿಸಿದ ನ್ಯಾಯಯುತ ಹೋರಾಟವನ್ನು ತರ್ಕಬದ್ದವಾಗಿ ಕಟ್ಟಿದ ಸತ್ಯ ಪ್ರತಿಪಾದನೆ ಮಾಡಿದ ವ್ಯಕ್ತಿ. ಗಾಂಧಿಜೀ ನ್ಯಾಯವಾದಿಯಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ತತ್ವಜ್ಞಾನಿಯಾಗಿ ನಮ್ಮೊಡನೆ ಇದ್ದಾರೆ. ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಒಂದು ದೇಶದ ಸ್ವಾತಂತ್ರ್ಯ ಹೋರಾಟವನ್ನು ಸಾಮಾಜಿಕ ಪರಿವರ್ತನೆಯ ಹೋರಾಟವನ್ನಾಗಿ ಪರಿವರ್ತಿಸಿ, ದೇಶದ ಮೂಲ ಕಾಯಿಲೆಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಲಭೂತವಾದ, ಕೋಮುವಾದಗಳನ್ನು ನಿವಾರಣೆ ಮಾಡಲು ಶ್ರಮಿಸಿದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ.ಕರೆಣ್ಣವರ್, ಜಿಲ್ಲಾ ನ್ಯಾಯಾಧೀಶರಾದ ಆರ್ ಎನ್ ಪ್ರವೀಣ್‌ಕುಮಾರ್, ಶ್ರೀರಾಮ ನಾರಾಯಣ ಹೆಗಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ ಎಂ ನಿವೇದಿತಾ, ನ್ಯಾಯಾಧೀಶರಾದ ರೇಷ್ಮಾ, ನಾಗೇಶ್, ಅಮರ್, ಗಾಯತ್ರಿ, ಮಲ್ಲಿಕಾರ್ಜುನ್, ಪ್ರಶಾಂತ್, ಸಿದ್ದರಾಜ್, ನಾಝೀಯಾ ಕೌಸರ್, ವಕೀಲರ ಸಂಘದ ಕಾರ್ಯದರ್ಶಿ ಎಸ್ ಬಸವರಾಜ್, ಸಹಕಾರ್ಯದರ್ಶಿ ಎ ಎಸ್ ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ ಎಂ ನೀಲಕಂಠಯ್ಯ, ಎಂ ರಾಘವೇಂದ್ರ, ಆರ್ ಭಾಗ್ಯಲಕ್ಷ್ಮೀ, ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X