ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

Date:

Advertisements

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ.

ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬಡರೈತ ಕುಮಾರ್ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದು, “ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಇದರಿಂದ ದಿನೇ ದಿನೆ ತೊಂದರೆಯಾಗುತ್ತಿದೆ. ಕಷ್ಟಪಟ್ಟು ಸಾಕಿದ್ದ ಎಂಟು ಮೇಕೆ ಮರಿಗಳು ಬೀದಿ ನಾಯಿಗಳಿಂದ ಸತ್ತಿವೆ. ಈಗೇನು ಮಾಡಬೇಕೆಂದು ದಿಕ್ಕೇ ತೋಚುತ್ತಿಲ್ಲ” ಎಂದು ಅಳಲು ತೋಡಿಕೊಂಡರು.

ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ರೈತ ಕುಮಾರ್ ಅವರಿಗೆ ಆರ್ಥಿಕ ಧನಸಹಾಯದ ಜತೆಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಮಾನವೀಯತೆ ಮೆರೆದರು.

Advertisements

ಗ್ರಾಮದ ಮುಖಂಡ ಬಸವೇಗೌಡ ಮಾತನಾಡಿ, “ಹಲವು ವರ್ಷಗಳಿಂದ ನಮ್ಮ ಗ್ರಾಮದ ಕುಮಾರ್ ಅವರು ಮೇಕೆ ಸಾಗಾಣಿಕೆ ಮಾಡುತ್ತ ಜೀವನ ಸಾಗಿಸುತ್ತಿದ್ದು, ಬೀದಿ ನಾಯಿಗಳ ಹಾವಳಿಯಿಂದ ಎಂಟು ಮೇಕೆಗಳು ಸಾವಿಗೀಡಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮದಲ್ಲಿ ಪದೇಪದೆ ಬೀದಿ ನಾಯಿಗಳು, ಜನರ ಮೇಲೆ, ರಾಸುಗಳ ಮೇಲೆ ದಾಳಿಮಾಡುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ‌ ಕಸವನಹಳ್ಳಿ ರಮೇಶ್ ಆಗ್ರಹ

ಗ್ರಾಮ ಪಂಚಾಯಿತಿ ಸದಸ್ಯೆ ರಮ್ಯ ಸುರೇಶ್, ಮಾಜಿ ಸದಸ್ಯೆ ಲತಾ ವಿಶ್ವನಾಥ್, ಕುಮಾರ್, ಬಸವೇಗೌಡ, ರಾಜೇಗೌಡ, ರಂಗೇಗೌಡ, ಕುಮಾರ್ ಗೌಡ, ಸತೀಶ್, ಗೌರಮ್ಮ, ರಾಜೇಗೌಡ, ಮಹೇಶ್, ರೈತ ಕುಮಾರ್, ಗಂಜಿಗೆರೆ ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X