ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.
“ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತಿ ವರ್ಷವೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಗೆ ದೊರೆತಿದೆ” ಎಂದು ತಿಳಿಸಿದ್ದಾರೆ.
“ಪಂಡಿತ್ ಎಂ ವೆಂಕಟೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಪಂಡಿತ್ ಬಸವರಾಜ ಭಜಂತ್ರಿಯವರನ್ನು ಆಯ್ಕೆಮಾಡಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಒಳಮೀಸಲಾತಿ ಜಾರಿಗೊಳಿಸುವಂತೆ ದಸಂಸ ಬೃಹತ್ ಪ್ರತಿಭಟನೆ
“ಅಕ್ಟೋಬರ್ 3ರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿಯವರಿಗೆ ಪ್ರದಾನ ಮಾಡಲಿದ್ದಾರೆ” ಎಂದು ಹೇಳಿದರು.
“ಪ್ರಶಸ್ತಿಯು ₹5 ಲಕ್ಷ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ” ಎಂದು ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ.