ಶಿವಮೊಗ್ಗ | ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ

Date:

Advertisements

ಮಧ್ಯಮಭಾಗದ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ “ಆರಬೈಟಲ್ ಅಥೆರೆಕ್ಟಮಿ” ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ ಲಕ್ಷ್ಮೀನಾರಾಯಣ ಆಚಾರ್ ತಿಳಿಸಿದರು.

ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಮ್ಮ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆಗೆ ಒಳಗಾದ ನಗರದ 76 ವರ್ಷದ ಚಂದ್ರಪ್ಪ ಶೆಟ್ಟಿಯವರಿಗೆ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ. ಶಿವಶಂಕರ್ ಟಿ ಹೆಚ್ ನೇತೃತ್ವದ ತಂಡ ನಡೆಸಿದ ಚಿಕಿತ್ಸೆ ಯಶಸ್ವಿಯಾಗಿದೆ” ಎಂದು ತಿಳಿಸಿದರು.

ವೈದ್ಯ ಡಾ ಶಿವಶಂಕರ್ ಟಿ ಹೆಚ್ ಮಾತನಾಡಿ, “ಹೃದಯದ ರಕ್ತನಾಳದಲ್ಲಿ ತುಂಬಾ ಕ್ಯಾಲ್ಸಿಯಂ ಇದ್ದರೆ ಈ ಹಿಂದೆ ಓಪನ್ ಹಾರ್ಟ್ ಸರ್ಜರಿ ಮಾಡುತ್ತಿದ್ದೆವು. ಈಗ ರಕ್ತನಾಳದ ಕ್ಯಾಲ್ಸಿಯಂ ಪುಡಿ ಪುಡಿ ಮಾಡಿ ಸ್ಟಂಟ್ ಹಾಕುವ ವಿಧಾನವಾಗಿದೆ. ಈ ವಿಧಾನದಿಂದ ರಕ್ತನಾಳಕ್ಕೆ ಅಪಾಯ ಕಡಿಮೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

“ಆರಬೈಟಲ್ ಅಥೆರೆಕ್ಟಮಿ ಡೈಮಂಡ್ ಬ್ಲಾಕ್ 360 ಸಾಧನವನ್ನು ಉಪಯೋಗಿಸಿ ರಕ್ತನಾಳದಲ್ಲಿ ಕ್ಯಾಲ್ಸಿಯಂ ಫ್ಯಾಟ್ ತೆಗೆದು ರಕ್ತನಾಳವನ್ನು ಶುದ್ದೀಕರಿಸಲಾಯಿತು. ನಂತರ ಸ್ಟಂಟ್ ಅಳವಡಿಸಲಾಗಿದೆ. ಇದರಿಂದ ರೋಗಿಗೆ ಯಾವುದೇ ತೊಂದರೆಯಾಗುವುದಿಲ್ಲ. ಶಸ್ತ್ರಚಿಕಿತ್ಸೆಯಾಗಿ ಮೂರು ದಿನಗಳ ಬಳಿಕ ರೋಗಿಯನ್ನು ಮನೆಗೆ ಕಳುಹಿಸಿಕೊಡಲಾಯಿತು” ಎಂದು ತಿಳಿಸಿದರು.

ನಿರ್ದೇಶಕರುಗಳಾದ ಡಾ ಪಿ. ಲಕ್ಷ್ಮೀನಾರಾಯಣ ಆಚಾರ್ (ಅಧ್ಯಕ್ಷರು ), ಸಿಇಒ ಡಾ ತೇಜಸ್ವಿ ಟಿ. ಎಸ್, ಮೆಡಿಕಲ್‌ ಡೈರೆಕ್ಟರ್‌ ಡಾ. ಪೃಥ್ವಿ ಬಿ ಸಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X