ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ.
ಬಸಮ್ಮ ಮುದುಕಪ್ಪ (55) ಮೃತ ಮಹಿಳೆ. ಇದೇ ವೇಳೆ ಸಿಡಿಲಿಗೆ ಎಮ್ಮೆಯೊಂದು ಸಾವನಪ್ಪಿದೆ ಹಾಗೂ ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಜಾಲಹಳ್ಳಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಕುಟುಂಬ ಕೃಷಿ ಜಮೀನನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆ. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿಗೆ ಗಿಡ-ಮರಗಳು ಉರುಳಿವೆ.
ಈ ಸುದ್ದಿ ಓದಿದ್ದೀರಾ? ಆಳಂದ | ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ ಪ್ರಕರಣ; ಪಿಡಿಒ ಅಮಾನತು
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
