ಚಿತ್ರದುರ್ಗ | ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ‌ ಕಸವನಹಳ್ಳಿ ರಮೇಶ್ ಆಗ್ರಹ

Date:

Advertisements

ಹಳ್ಳಿಗಳಿಂದ ರಾಜ್ಯದ ಆಡಳಿತ ಎನ್ನುವ ಸಚಿವ ಕೃಷ್ಣಭೈರೇಗೌಡರು ಗ್ರಾಮೀಣ ಭಾಗದ ಜನರ ಜೀವನಾಡಿಗಳಾದ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೀದಿಯಲ್ಲಿ ನಿಲ್ಲಿಸಿ ಯಾವ ಮಟ್ಟಿಗಿನ ಆಡಳಿತದಲ್ಲಿ ಸುಧಾರಣೆ ತರಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ನೇರವಾಗಿ ಪ್ರಶ್ನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕಂದಾಯ ಅಧಿಕಾರಿಗಳು ಕೇಳುತ್ತಿರುವ ಕನಿಷ್ಠ ಬೇಡಿಕೆಗಳನ್ನು ಕಾನೂನು ಮತ್ತು ಮಾನವೀಯ ನೆಲಗಟ್ಟಿನಲ್ಲಿ ಈಡೇರಿಸಬೇಕಾಗುತ್ತದೆ. ಕುಳಿತುಕೊಳ್ಳಲು ಸ್ವಂತ ಕಚೇರಿ ಇಲ್ಲದೆ ಹಳ್ಳಿಗಳಲ್ಲಿರುವ ಅರಳಿ ಕಟ್ಟೆ, ಜಗಲಿಕಟ್ಟೆ, ಹಳೆಯ ಶಿಥಿಲ ಕಟ್ಟಡ, ದೇವಸ್ಥಾನದ ಆವರಣದಲ್ಲಿ ಕುಳಿತು ಕಂದಾಯ ದಾಖಲೆಗಳನ್ನು, ಗ್ರಾಮದ ಆಡಳಿತವನ್ನು ನಿರ್ವಹಣೆ ಮಾಡಬೇಕಾಗುವ ದುಃಸ್ಥಿತಿ ಬಂದಿದೆ” ಎಂದು ಕಿಡಿಕಾರಿದರು.

“ಅಧಿಕಾರಿಗಳಿಗೆ ಒಂದು ಸುಸಜ್ಜಿತ ಕಟ್ಟಡ ಕಟ್ಟಿಸಿಕೊಡಲು ಮನಸ್ಸು ಮಾಡಬೇಕು. ಒಂದೇ ಮೊಬೈಲ್‌ನಲ್ಲಿ ಸರ್ಕಾರದ ಹತ್ತಾರು ಆ್ಯಪ್‌ಗಳ ಕೆಲಸ ಮಾಡಲು ಕಷ್ಟಸಾಧ್ಯ. ಆದ್ದರಿಂದ ಅವರಿಗೆ ಟ್ಯಾಬ್, ಸ್ಕ್ಯಾನರ್, ಪ್ರಿಂಟರ್ ಇತ್ಯಾದಿ ಆಧುನಿಕ ಡಿಜಿಟಲ್ ತಂತ್ರಜ್ಞಾನಕ್ಕೆ ಸರಿಹೊಂದುವ ಸೌಲಭ್ಯಗಳನ್ನು ಕೊಡಬೇಕು. ಅಲ್ಲದೆ ಕಾಲಕಾಲಕ್ಕೆ ತಾಂತ್ರಿಕ ತರಬೇತಿ ಕೊಡಬೇಕು ಹುದ್ದೆಯನ್ನು ಮೇಲ್ದರ್ಜೆಗೇರಿಸಬೇಕು. ಪದೋನ್ನತಿ ಎನ್ನುವುದು ಅವರಿಗೆ ಮರೀಚಿಕೆಯಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿ ಮುಂದುವರಿಯುವ ಅನಿವಾರ್ಯ ಸ್ಥಿತಿಯಲ್ಲಿ ಮಾನಸಿಕವಾಗಿ ತೊಳಲಾಡುತ್ತಿದ್ದಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

“ಈ ಸಮಸ್ಯೆಗಳು ಕೇವಲ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳಲ್ಲ. ಗ್ರಾಮೀಣ ಭಾಗದ ಜನರ ಭಾಗವೇ ಆಗಿರುವ ಇವರು ಸರಿಯಾದ ಸಮಯಕ್ಕೆ ಸರಿಯಾದ ಜಾಗದಲ್ಲಿ ನಮಗೆ ದಾಖಲೆಗಳನ್ನು ಒದಗಿಸದಿದ್ದರೆ ಹಳ್ಳಿಗಳ ಅಭಿವೃದ್ಧಿಯಾಗುವುದಿಲ್ಲ. ಆದ್ದರಿಂದ ದೇಶ ವಿದೇಶಗಳನ್ನು ಸುತ್ತಿ ಬಂದಿರುವ ತಾವುಗಳು ಅವರು ಕೇಳುವ ಬೇಡಿಕೆಗಳನ್ನು ಕಾನೂನು ಹಾಗೂ ಮಾನವಿಯ ನೆಲೆಗಟ್ಟಿನಲ್ಲಿ ಈಡೇರಿಸಬೇಕು” ಎಂದು ಸಚಿವ ಕೃಷ್ಣಭೈರೇಗೌಡ ಅವರಿಗೆ ಒತ್ತಾಯಿಸಿದರು.

“ಕಂದಾಯ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಪರವಾಗಿ ನಾವೂ ಕೂಡಾ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X